ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ನೂ ಆರಂಭಗೊಳ್ಳದ 2,956 ಮನೆ ಕಾಮಗಾರಿ

ವಸತಿ ಯೋಜನೆ; 3 ವರ್ಷಗಳಲ್ಲಿ 8,250 ಮನೆಗಳು ಮಂಜೂರು
Published 11 ಡಿಸೆಂಬರ್ 2023, 17:16 IST
Last Updated 11 ಡಿಸೆಂಬರ್ 2023, 17:16 IST
ಅಕ್ಷರ ಗಾತ್ರ

ಚಾಮರಾಜನಗರ: ಮೂರು ವರ್ಷಗಳ ಅವಧಿಯಲ್ಲಿ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ 8,250 ಮನೆಗಳು ಮಂಜೂರಾಗಿದ್ದು, ಈ ಪೈಕಿ 2,610 ಮನೆಗಳು ಪೂರ್ಣಗೊಂಡಿವೆ ಎಂದು ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದ್ದಾರೆ. 

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಸೋಮವಾರ ಕೊಳ್ಳೇಗಾಲ ಶಾಸಕ ಎ.ಆರ್‌.ಕೃಷ್ಣಮೂರ್ತಿ ಅವರು ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ. 

‘2,637 ಮನೆಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿದ್ದು, 2,956 ಮನೆಗಳು ಇನ್ನೂ ಪ್ರಾರಂಭವಾಗಿಲ್ಲ. 47 ಮನೆಗಳು ತಾತ್ಕಾಲಿಕವಾಗಿ ಬ್ಲಾಕ್‌ ಆಗಿವೆ’ ಎಂದು ಜಮೀರ್‌ ಅಹಮದ್‌ ಖಾನ್‌ ಹೇಳಿದ್ದಾರೆ. 

649 ಮನೆಗಳು ಪೂರ್ಣ: ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆಯೂ ಶಾಸಕರು ಪ್ರಶ್ನೆ ಕೇಳಿದ್ದಾರೆ. 

ಅದಕ್ಕೆ ಉತ್ತರಿಸಿರುವ ಸಚಿವರು, ‘2020–21ರಿಂದ ಇಲ್ಲಿಯವರೆಗೆ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಕೊಳ್ಳೇಗಾಲ ಕ್ಷೇತ್ರಕ್ಕೆ 1,509 ಮನೆಗಳನ್ನು ಮಂಜೂರು ಮಾಡಲಾಗಿದ್ದು, 649 ಮನೆಗಳು ಪೂರ್ಣಗೊಂಡಿವೆ’ ಎಂದು ಹೇಳಿದ್ದಾರೆ. 431 ಮನೆಗಳ ಕಾಮಗಾರಿಗಳು ವಿವಿಧ ಹಂತದಲ್ಲಿದ್ದು, 422 ಮನೆಗಳ ಕೆಲಸ ಇನ್ನೂ ಆರಂಭವಾಗಿಲ್ಲ. ಏಳು ಮನೆಗಳು ತಾತ್ಕಾಲಿಕವಾಗಿ ಬ್ಲಾಕ್‌ ಆಗಿದೆ’ ಎಂದು ವಿವರಿಸಿದ್ದಾರೆ.

ಜಮೀರ್ ಅಹಮದ್ ಖಾನ್ 
ಜಮೀರ್ ಅಹಮದ್ ಖಾನ್ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT