ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ಮಾನವ ಹಾಗೂ ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಕಮಾಂಡ್ ಸೆಂಟರ್ ಮಹತ್ವದ ಪಾತ್ರ ವಹಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆಯ ಕಚೇರಿ ಆವರಣದಲ್ಲಿ ಬುಧವಾರ ಸಮಗ್ರ ಕಮಾಂಡ್ ಸೆಂಟರ್ ಉದ್ಘಾಟಿಸಿ ಮಾತನಾಡಿ, ‘ಅರಣ್ಯದೊಳಗೆ ಗಸ್ತು ಹೆಚ್ಚಿಸುವ ಮೂಲಕ ಅರಣ್ಯದಂಚಿನಲ್ಲಿ ವಾಸವಿರುವ ಜನರಿಗೆ ಮಾನವ–ಪ್ರಾಣಿ ಸಹಬಾಳ್ವೆಯ ಅರಿವು ಮೂಡಿಸಲು, ಜೀವ ಹಾನಿ ತಪ್ಪಿಸಲು ಕಮಾಂಡ್ ಸೆಂಟರ್ ತೆರೆಯಲಾಗಿದೆ ಎಂದರು.

ಪ್ರಸ್ತುತ ನಾಗರಹೊಳೆ, ಎಂ.ಎಂ ಹಿಲ್ಸ್, ಕಾಳಿ, ಮಡಿಕೇರಿ ವನ್ಯಧಾಮಗಳಲ್ಲಿ ಕಮಾಂಡ್ ಕೇಂದ್ರ ತೆರೆಯಲಾಗಿದ್ದು ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದೆ. ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಿರುವ ಚಿಕ್ಕಮಗಳೂರು ವಿಭಾಗ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಮೈಸೂರು ವಿಭಾಗ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಹಾಸನ ವಲಯದಲ್ಲೂ ಕಮಾಂಡ್ ಸೆಂಟರ್ ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ರಾಜ್ಯಮಟ್ಟದ ಕೇಂದ್ರ ಸಿದ್ಧವಾಗುತ್ತಿದ್ದು, ಅಧಿವೇಶನದ ನಂತರ ಉದ್ಘಾಟಿಸಲಾಗುವುದು ಎಂದು ಸಚಿವರು ತಿಳಿಸಿದರು.

ಕಮಾಂಡ್ ಸೆಂಟರ್ನಲ್ಲಿ ಕೃತಕ ಬುದ್ಧಿಮತ್ತೆ ಕ್ಯಾಮರಾ, ಥರ್ಮಲ್ ಡ್ರೋನ್ ಕ್ಯಾಮರಾ ಸಹಿತ ಆಧುನಿಕ ತಂತ್ರಜ್ಞಾನ ಆಧಾರಿತ ಉಪಕರಣಗಳನ್ನು ಬಳಸಿಕೊಂಡು ವನ್ಯಜೀವಿಗಳ ಚಲನ ವಲನದ ಬಗ್ಗೆ ನಿಗಾ ಇರಿಸಲಾಗುವುದು. ಪ್ರಾಣಿಗಳು ಕಾಡಿನಂಚಿನ ಯಾವ ಗ್ರಾಮಗಳ ಬಳಿ ಬಂದಿವೆ ಎಂದು ತತ್ ಕ್ಷಣದ ಮಾಹಿತಿ ಪಡೆದು ತುರ್ತು ಕ್ರಮ ವಹಿಸಿ ಜೀವಹಾನಿ ತಡೆಯಬಹುದಾಗಿದೆ ಎಂದರು.

ವರ್ಚುವಲ್ ಮೂಲಕ ಕಮಾಂಡ್ ಸೆಂಟರ್ ಮಾಹಿತಿ ನೀಡಿದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ರಾಜನ್, ಕಮಾಂಡ್ ಸೆಂಟರ್ ತಂತ್ರಾಂಶದಲ್ಲಿ ಸಿಬ್ಬಂದಿ ಎಷ್ಟು ಹೊತ್ತಿಗೆ ಯಾವ ವಲಯದಲ್ಲಿ ಗಸ್ತಿನಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಲಿದೆ. ವನ್ಯಜೀವಿಗಳು ನಾಡಿನತ್ತ ಬಂದಾಗ ಸಕಾಲಿಕ ಮಾಹಿತಿ ಪಡೆದು ಕಾಡಿನಂಚಿನ ಜನರಿಗೆ ವಾಟ್ಸ್ ಆ್ಯಪ್ ಗ್ರೂಪಗಳ ಮೂಲಕ ಎಚ್ಚರಿಕೆಯ ಸಂದೇಶ ರವಾನಿಸಬಹುದು ಎಂದರು.

ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಹನೂರು ಶಾಸಕ ಎಂ.ಆರ್. ಮಂಜುನಾಥ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್, ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೌತ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್ ಭಾಸ್ಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.