ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ: ವಿದ್ಯುತ್ ಸಂಪರ್ಕಕ್ಕಾಗಿ ಉಪವಾಸ ಸತ್ಯಾಗ್ರಹ

Published 15 ಮಾರ್ಚ್ 2024, 15:14 IST
Last Updated 15 ಮಾರ್ಚ್ 2024, 15:14 IST
ಅಕ್ಷರ ಗಾತ್ರ

ಕೊಳ್ಳೇಗಾಲ: ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಒತ್ತಾಯಿಸಿ ಹನೂರು ತಾಲ್ಲೂಕಿನ ಪಾಲಾರ್ ಹಾಗೂ ಸುತ್ತಲಿನ ಪೋಡುಗಳ 50ಕ್ಕೂ ಹೆಚ್ಚು ಮಂದಿ ಅರಣ್ಯವಾಸಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್‌ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಿದರು.

ಅರಣ್ಯವಾಸಿ ಸೇವಾ ಟ್ರಸ್ಟ್ ಕಾರ್ಯಾಧ್ಯಕ್ಷ ನಾಗೇಂದ್ರ ಮಾತನಾಡಿ, ‘ಗಡಿಭಾಗದ ಪಾಲರ್ ಹಾಗೂ ಪೋಡುಗಳಿಗೆ ಸರಿಯಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಕೆಲ ಗ್ರಾಮಗಳಲ್ಲಿ ವಿದ್ಯುತ್ ಇಲ್ಲದೆ ಜನಸಾಮಾನ್ಯರು ಕಷ್ಟಪಡುತ್ತಿದ್ದಾರೆ. ವಿದ್ಯುತ್ ಕಲ್ಪಿಸದಿದ್ದರೆ ಉಪವಾಸ ಮಾಡಿ ಸಾಯುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸೆಸ್ಕ್ ಇಇ ತಬಸ್ಸುಮ್ ಅಬ್ಜ್, ಸಮಸ್ಯೆ ಬಗೆಹರಿಸಲು ಒಂದು ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಭಟನಕಾರರು ಒಪ್ಪಲಿಲ್ಲ. ಅಧಿಕಾರಿಗಳ ಜೊತೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ವಿದ್ಯುತ್‌ ಸಂಪರ್ಕ ಕಲ್ಪಿಸಲು ಅಗತ್ಯ ಪರಿಕರಗಳನ್ನು ಕಳುಹಿಸಿಕೊಡಲಾಗುವುದು’ ಎಂದು ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಕೈಬಿಟ್ಟರು.

ಪ್ರತಿಭಟನೆಯಲ್ಲಿ ರಾಮನಗರ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಜ್ವಲ್, ಪ್ರವೀಣ್, ಮೇಫೂಜ್, ಎಸ್‌ಡಿಪಿಐ ಟೌನ್ ಅಧ್ಯಕ್ಷ ಜಾಕೀರ್ ಪಾಷ, ಜಿಲ್ಲಾ ಉಪಾಧ್ಯಕ್ಷ ಮಹಮ್ಮದ್ ಕಲೀಲ್, ಪಾಲರ್ ಗ್ರಾ.ಪಂ ಉಪಾಧ್ಯಕ್ಷ ಕೆಂಪಾರ, ಸದಸ್ಯರಾದ ಮಾದೇವಿ, ಮಹದೇವ, ಸಿದ್ದಮರಿ, ಕೆಂಪಮ್ಮ, ಲಕ್ಷ್ಮಿ, ಈರಮ್ಮ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT