ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿಎಫ್‌ ಏಡುಕುಂಡಲು, ಸಂತೋಷ್‌ಕುಮಾರ್‌ ವರ್ಗ

Last Updated 10 ಆಗಸ್ಟ್ 2022, 15:47 IST
ಅಕ್ಷರ ಗಾತ್ರ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕುಂಡಲು ಹಾಗೂ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಜಿ.ಸಂತೋಷ್‌ಕುಮಾರ್‌ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ವಿ.ಏಡುಕುಂಡಲು ಅವರನ್ನು ಕೋಲಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಡಾ.ಜಿ.ಸಂತೋಷ್‌ಕುಮಾರ್‌ ಅವರನ್ನು ನಿಯೋಜಿಸಲಾಗಿದೆ.

ಮೈಸೂರು ಕಾರ್ಯ ಯೋಜನೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ದೀಪಾ ಜೆ. ಕಾಂಟ್ರಾಕ್ಟರ್‌ ಅವರನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT