ಶನಿವಾರ, ಆಗಸ್ಟ್ 20, 2022
21 °C

ಅನೈತಿಕ ಸಂಬಂಧ: ಯುವಕನ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹನೂರು: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕ ನನ್ನು ಪತಿಯೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ರಾಮಾ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾಲ್ಲೂಕಿನ ಗೆಜ್ಜಲನತ್ತ ಗ್ರಾಮದ ಅರವಿಂದ್‌ಕುಮಾರ್(22) ಕೊಲೆ ಯಾದ ವ್ಯಕ್ತಿ. ಅದೇ ಗ್ರಾಮದ ಮುರುಗೇಶ (41) ಕೊಲೆ ಆರೋಪಿ.

ಗೆಜ್ಜಲನತ್ತ ಗ್ರಾಮದ ಮುರುಗೇಶ ಎಂಬಾತ ಅದೇ ಗ್ರಾಮದ ಪುಷ್ಪಾ ಎಂಬವರನ್ನು 17 ವರ್ಷದ ಹಿಂದೆ ವಿವಾಹವಾಗಿದ್ದರು. ಮುರುಗೇಶ ಚಾಮರಾಜನಗರ ಸಮೀಪದ ಕ್ವಾರಿ ಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ಮಧ್ಯೆ ಪುಷ್ಪಾಳಿಗೆ ಅದೇ ಗ್ರಾಮದ ಅರವಿಂದ್ ಕುಮಾರ್ ಎಂಬವರ ಪರಿಚ ಯವಾಗಿದ್ದು, ಪರಿಚಯ ಸ್ನೇಹವಾಗಿ, ಸ್ನೇಹ ಅನೈತಿಕ ಸಂಬಂಧಕ್ಕೆ ತಿರುಗಿದೆ.

ಶನಿವಾರ ತಡರಾತ್ರಿ ಮುರುಗೇಶ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದಾಗ ಮನೆಯಲ್ಲಿ ಅರವಿಂದ್ ಕುಮಾರ್ ಮತ್ತು ಪುಷ್ಪಾ ಜೊತೆಗಿರುವುದು ಕಂಡುಬಂದಿದೆ. ಇದರಿಂದ ಕೋಪಗೊಂಡ ಮುರುಗೇಶ ದೊಣ್ಣೆಯಿಂದ ಅರವಿಂದರ ತಲೆ ಮತ್ತು ಕಾಲಿನ ಭಾಗಕ್ಕೆ ಬಲವಾಗಿ ಹೊಡೆದಿದ್ದಾರೆ. ಗಲಾಟೆಯ ಶಬ್ದ ಕೇಳಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುವಿಗೆ ಹೋಲಿಕ್ರಾಸ್ ಮತ್ತು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

ಪೊಲೀಸರಿಂದ ಸ್ಥಳ ಪರಿಶೀಲನೆ:
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ರಾಮಾಪುರ ಸಿಪಿಐ ಮನೋಜ್‌ಕುಮಾರ್ ಮತ್ತು ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು