ಸಂತೇಮರಹಳ್ಳಿ: ‘ವಿದ್ಯಾರ್ಥಿಗಳು ಸಾಧನೆ ಕುರಿತು ಸ್ಪಷ್ಟ ಗುರಿ ಹೊಂದಿದಾಗ ಮಾತ್ರ ಯಶಸ್ಸು ಸಾಧ್ಯವಾಗುತ್ತದೆ’ ಎಂದು ಶಾಲಾ ಶಿಕ್ಷಣ ಇಲಾಖೆ ನಿವೃತ್ತ ಉಪ ನಿರ್ದೇಶಕ ಟಿ.ಆರ್.ಸಿದ್ದರಾಜು ತಿಳಿಸಿದರು.

ಸಮೀದ ಕುದೇರು ಗ್ರಾಮದ ಎಂ.ಸಂಗಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈಚೆಗೆ ನಡೆದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಇಕೊಕ್ಲಬ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳಿಗೆ ಜೀವನದಲ್ಲಿ ಪದವಿ ಶಿಕ್ಷಣ ಬಹಳ ಮುಖ್ಯವಾಗಿದ್ದು, ಓದಿನ ಕಡೆಗೆ ಪ್ರಾಮುಖ್ಯತೆ ನೀಡಬೇಕು’ ಎಂದರು.

‘ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪದವಿ ಶಿಕ್ಷಣದ ಕಡೆ ಗಮನಹರಿಸದೆ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಜತೆಗೆ ಕೆಟ್ಟ ಚಟಗಳಿಗೆ ಬಲಿಯಾಗುತ್ತಿರುವುದು ಬೇಸರದ ಸಂಗತಿ. ವಿದ್ಯಾರ್ಥಿಗಳನ್ನು ಸರಿದಾರಿಗೆ ತರುವಲ್ಲಿ ಉಪನ್ಯಾಸಕರ ಪಾತ್ರ ಮುಖ್ಯ’ ಎಂದರು.

ಚಾಮೂಲ್ ವ್ಯವಸ್ಥಾಪಕ ನಿರ್ದೇಶಕ ರಾಜ್ಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳು ಭಗವದ್ಗೀತೆ, ರಾಮಾಯಣ, ಮಹಾಭಾರತ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಆ ಮೂಲಕ ಜ್ಞಾರ್ನಾಜನೆ ಸಾಧ್ಯವಾಗುತ್ತದೆ. ದೈಹಿಕ ಮತ್ತು ಮಾನಸಿಕ ನೆಮ್ಮದಿಗೆ ಪ್ರತಿಯೊಬ್ಬರು ಕ್ರೀಡೆಯಲ್ಲಿ ಭಾಗವಹಿಸಬೇಕು. ಒಳ್ಳೆಯ ಆಲೋಚನಾ ಶಕ್ತಿ ಬೆಳೆಸಿಕೊಂಡಾಗ ಮಾತ್ರ ಸಾಧನೆ ಸಾಧ್ಯವಾಗುತ್ತದೆ’ ಎಂದರು.

ಕಳೆದ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಪ್ರಾಂಶುಪಾಲ ಎನ್.ಎಂ.ಶಿವಪ್ರಕಾಶ್, ಸಂತೇಮರಹಳ್ಳಿ ಕಾಲೇಜಿನ ಪ್ರಾಂಶುಪಾಲ ಪಿ.ಪ್ರಿಯಾಶಂಕರ್, ಚಾಮೂಲ್ ನಿರ್ದೇಶಕ ಕಮರವಾಡಿ ರೇವಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಹದೇವಯ್ಯ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.