ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಯಂಪ್ರೇರಿತರಾಗಿ ಬಾಗಿಲು ಹಾಕಿದ ದಿನಸಿ ವ್ಯಾಪಾರಸ್ಥರು

Last Updated 9 ಮೇ 2021, 7:11 IST
ಅಕ್ಷರ ಗಾತ್ರ

ಚಾಮರಾಜನಗರ: ಒಂದೇ ರಾತ್ರಿಯಲ್ಲಿ 14 ಮಂದಿ ಕೋವಿಡ್‌ ಆಸ್ಪತ್ರೆಯಲ್ಲಿ ಮೃತಪಟ್ಟ ಸುದ್ದಿ ಹರಡುತ್ತಿದ್ದಂತೆ ನಗರದಲ್ಲಿ ವ್ಯಾಪಾರಸ್ಥರು ಪೊಲೀಸರ ಸೂಚನೆಗೂ ಕಾಯದೇ ಸ್ವಯಂಪ್ರೇರಿತರಾಗಿ ಭಾನುವಾರ ತಮ್ಮ ಅಂಗಡಿಗಳಿಗೆ ಬಾಗಿಲು ಹಾಕಿದರು.

ಇದುವರೆಗೂ ಮಧ್ಯಾಹ್ನ 12 ಗಂಟೆಯವರೆಗೂ ದಿನಸಿ ವ್ಯಾಪಾರ ನಡೆಯುತ್ತಿತ್ತು . ಪೊಲೀಸ್ ವಾಹನ ಸೈರನ್‌ ಮೊಳಗಿಸಿ ಬಂದ ನಂತರವೇ ಬಾಗಿಲು ಬಂದ್ ಮಾಡಲಾಗುತ್ತಿತ್ತು. ಆದರೆ, ಒಂದೇ ರಾತ್ರಿ ಹಲವು ಮಂದಿ ಕೋವಿಡ್ ರೋಗಿಗಳು ಸಾವಿಗೀಡಾಗಿರುವ ಮಾಹಿತಿ ತಿಳಿದ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಬೆಳಿಗ್ಗೆ 10 ಗಂಟೆಗೆ ತಮ್ಮ ಅಂಗಡಿಗಳನ್ನು ಬಂದ್ ಮಾಡಿದರು.

ಇಲ್ಲಿಯವರೆಗೂ ಬೆಳಿಗ್ಗೆ ಹೊತ್ತು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಂಚರಿಸುತ್ತಿದ್ದರು. ಆದರೆ, ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಜನಸಂಚಾರವೂ ವಿರಳವಾಯಿತು. ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿಗಳು 10 ಗಂಟೆಯ ಹೊತ್ತಿಗೆ ಬಿಕೊ ಎನ್ನುತ್ತಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT