ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರದಲ್ಲಿ ಮುಂದುವರಿದ ಸಾವಿನ ಸರಣಿ

Last Updated 10 ಮೇ 2021, 8:32 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಸೋಮವಾರ ಮುಂದುವರಿದಿದೆ. ಭಾನುವಾರ ಸಂಜೆ 6 ಗಂಟೆಯಿಂದ ಸೋಮವಾರ ಬೆಳಿಗ್ಗೆ 9 ಗಂಟೆಯವರೆಗೆ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಒಬ್ಬರು ಕೊಳ್ಳೇಗಾಲ ಮತ್ತೊಬ್ಬರು ನಂಜನಗೂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

ಚಾಮರಾಜನಗರ ತಾಲ್ಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಗುರುಪ್ರಸಾದ್ ಹಾಗೂ ಇವರ ಪತ್ನಿ ರಶ್ಮಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಇವರ 5 ವರ್ಷ ವಯಸ್ಸಿನ ಪುತ್ರಿ ಸುಧಾಮಣಿ ಅನಾಥಳಾಗಿದ್ದಾಳೆ.

ಅಮಚವಾಡಿ ಗ್ರಾಮದಲ್ಲಿ ದಿನ ಬಿಟ್ಟು ದಿನ ಒಂದೇ ಕುಟುಂಬದ ಮೂವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮುದ್ದುಮಲ್ಲಪ್ಪ, ಇವರ ಪುತ್ರ ವಿರೂಪಾಕ್ಷಪ್ಪ ಕಳೆದೆರಡು ದಿನಗಳಲ್ಲಿ ಸಾವಿಗೀಡಾಗಿದ್ದರು. ಮತ್ತೊಬ್ಬ ಪುತ್ರ ಸಹ ಸೋಮವಾರ ಮೃತಪಟ್ಟಿದ್ದಾರೆ.

ಚಾಮರಾಜನಗರ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆದಯ ಸಹಾಯಕ ನಿರ್ದೇಶಕ ಚೆಲುವಯ್ಯ (50) ಅವರು ಸೋಮವಾರ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಮೊದಲು ಸಂತೇಮರಹಳ್ಳಿಯ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಇವರನ್ನು ದಾಖಲಿಸಲಾಗಿತ್ತು. ಆರೋಗ್ಯ ಬಿಗಡಾಯಿಸಿದ್ದರಿಂದ ಇವರನ್ನು ಜಿಲ್ಲಾಸ್ಪತ್ರೆಗೆ ಕಳೆದೆರಡು ದಿನಗಳ ಹಿಂದೆಯಷ್ಟೇ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಇವರು ಮೃತಪಟ್ಟರು. ಭಾನುವಾರವಷ್ಟೇ ಮಲೆಮಹದೇಶ್ವರ ಬೆಟ್ಟ ವನ್ಯಜೀವಿ ಧಾಮದ ಉಪವಲಯ ಅರಣ್ಯಾಧಿಕಾರಿ ನೂರ್‌ ಅಹಮ್ಮದ್ ಖಾನ್ ಕೋವಿಡ್‌ನಿಂದ ಮೃತಪಟ್ಟಿದ್ದರು.

ಇನ್ನೂ ಹಲವು ಅಧಿಕಾರಿಗಳು ಸೋಂಕಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT