ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ 76ನೇ ಸ್ವಾತಂತ್ರೋತ್ಸವ ದಿನಾಚರಣೆಯ ಅಮೃತ ಮಹೋತ್ಸವ ಕಾರ್ಯಕ್ರಮ ಸೋಮವಾರ (ಆಗಸ್ಟ್ 15) ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಧ್ವಜಾರೋಹಣ ನೇರವೇರಿಸಿ, ಸ್ವಾತಂತ್ರೋತ್ಸವದ ಸಂದೇಶ ನೀಡುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.

ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜಿ.ನಿಜಗುಣರಾಜು, ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಲಿದೆ.

ರಂಗಮಂದಿರ ಉದ್ಘಾಟನೆ:ಜಿಲ್ಲಾಡಳಿತ, ಲೋಕೋಪಯೋಗಿ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ, ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರ ಉದ್ಘಾಟನಾ ಸಮಾರಂಭ ಸೋಮವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸಮಾರಂಭ ಉದ್ಘಾಟಿಸುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ, ಸದಸ್ಯರಾದ ಮಮತ ಬಾಲಸುಬ್ರಮಣ್ಯಂ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಎಂ.ಮಂಜುಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಪ್ರಕಾಶ್ ಜಿ.ಟಿ. ನಿಟ್ಟಾಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.