ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕ್ಷೇತ್ರದ ಅಭಿವೃದ್ದಿಗಾಗಿ ಅವಕಾಶ ಕೊಡಿ: ರಾಜ್‌ಗೋಪಾಲ್

Published 3 ಏಪ್ರಿಲ್ 2024, 3:10 IST
Last Updated 3 ಏಪ್ರಿಲ್ 2024, 3:10 IST
ಅಕ್ಷರ ಗಾತ್ರ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಬಯಸಿದ್ದೇನೆ. ಕ್ಷೇತ್ರದ ಮತದಾರರು ನನಗೊಂದು ಅವಕಾಶ ಮಾಡಿಕೊಡಬೇಕು ಎಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜಿ.ಡಿ.ರಾಜ್‌ಗೋಪಾಲ್ ಮಂಗಳವಾರ ಮನವಿ ಮಾಡಿದರು.

ನಾಮಪತ್ರ ಸಲ್ಲಿಸುವುದಕ್ಕೂ ಮೊದಲು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘2019ರ ಚುನಾವಣೆಯಲ್ಲೂ ಸ್ಪರ್ಧೆ ಮಾಡಿದ್ದೆ. 5000 ಮತಗಳನ್ನು ಪಡೆದಿದ್ದೆ. ಈ ಬಾರಿಯೂ ಸ್ಪರ್ಧಿಸುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದೇನೆ’ ಎಂದರು. 

‘ಚಾಮರಾಜನಗರ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಕಾರ್ಮಿಕ ಆಸ್ಪತ್ರೆಯ ಅಗತ್ಯವಿದೆ. ಸಂಸದನಾದರೆ ಈ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮವಹಿಸುವೆ. ಕಾಡಂಚಿನ ಪ್ರದೇಶಗಳಲ್ಲಿ ಜನರು, ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಮಾನವ ವನ್ಯಜೀವಿ ಸಂಘರ್ಷ ತಡೆಗೆ ಕ್ರಮ ವಹಿಸಬೇಕಾಗಿದೆ. ಮಹದೇಶ್ವರ ಬೆಟ್ಟದ ರಸತೆ ಅಭಿವೃದ್ಧಿ ಪಡಿಸುವ ಅಗತ್ಯವಿದೆ. ಅದಕ್ಕಾಗಿ ಯೋಜನೆ ಹಾಕಿಕೊಂಡಿದ್ದೇನೆ. ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುತ್ತೇನೆ’ ಎಂದು ಹೇಳಿದರು. 

ಮುಖಂಡರಾದ ಸಣ್ಣನಾಯಕ, ಗಜೇಂದ್ರ, ಬಾಬು, ನಾಗರಾಜು, ಮಣಿಕಂಠ, ಪುಟ್ಟಸ್ವಾಮಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT