ಯಳಂದೂರು: ಪಟ್ಟಣದಲ್ಲಿ ಬುಧವಾರ ತಾಲ್ಲೂಕು ಬಲಗೈ ಸಮುದಾಯಗಳ ಒಕ್ಕೂಟ, ಸಂಘ ಸಂಸ್ಥೆಗಳ ಮುಖಂಡರು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಸಮಿತಿಯ ಸದಸ್ಯರು ಪರಿಶಿಷ್ಟ ಜಾತಿಯ ಒಳಮೀಸಲಾತಿ ಹಂಚಿಕೆ ಸಂಬಂಧ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಅನುಷ್ಠಾನ ವಿರೋಧಿಸಿ ಬುಧವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಅಂಬೇಡ್ಕರ್ ಸಮುದಾಯ ಭವನದ ಮುಂಭಾಗದಲ್ಲಿ ಜಮಾಯಿಸಿದ ಸಾವಿರಾರು ಜನರು ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಎಸ್ಬಿಐ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ನಂತರ ತಹಶೀಲ್ದಾರ್ ಕಚೇರಿ ಮುಂಭಾಗ ಸೇರಿ, ಸಮುದಾಯಕ್ಕೆ ನ್ಯಾಯ ಒದಗಿಸದೆ ಮೌನವಾಗಿರುವ ಬಲಗೈ ಸಮುದಾಯದ ಸಚಿವರು ಹಾಗೂ ಶಾಸಕರ ನಡೆಯನ್ನು ವಿರೋಧಿಸಿದರು.

ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಕೆಸ್ತೂರು ಸಿದ್ದರಾಜು ಮಾತನಾಡಿ, ‘ರಾಜ್ಯ ಸರ್ಕಾರ ರಾಜಕೀಯ ಲಾಭದ ದೃಷ್ಟಿಯಿಂದ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಗೆ ಮುಂದಾಗಿದೆ. ಇದರಿಂದ ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯವಾಗಲಿದೆ. ಸಾರ್ವಜನಿಕ ಚರ್ಚೆಗೆ ಅವಕಾಶ ನೀಡದೆ, ವರದಿಯನ್ನು ಯಥಾವತ್ ಅನುಷ್ಠಾನ ಮಾಡುವುದು ಸಮ್ಮತವಲ್ಲ’ ಎಂದರು.

ಕಾರ್ಯದರ್ಶಿ ಯರಿಯೂರು ನಟರಾಜು, ‘ಒಳ ಮೀಸಲಾತಿ ಹಂಚಿಕೆ ವಿಷಯ ಕಾನೂನು ಬದ್ಧ ಆಗುವ ತನಕ ಜಾತಿ ಪ್ರಮಾಣ ಪತ್ರ ನೀಡಬಾರದು, ಹುದ್ದೆ ಮತ್ತು ಶಿಕ್ಷಣ ಮತ್ತಿತರ ಕ್ಷೇತ್ರಗಳಲ್ಲಿ ಮೀಸಲಾತಿ ಪ್ರಕಟಿಸಬಾರದು. ಅವೈಜ್ಞಾನಿಕ ಮೀಸಲಾತಿ ಹಂಚಿಕೆಯಿಂದ ಸಮುದಾಯದ ಜನರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ತನಕ ಹೋರಾಟ ನಿಲ್ಲದು’ ಎಂದು ಹೇಳಿದರು.

ಶಿರಸ್ತೇದಾರ್ ಶಾಂತಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರಧಾನ ಕಾರ್ಯದರ್ಶಿ ನಟರಾಜು, ದಸಂಸ ಜಿಲ್ಲಾ ಸಂಚಾಲಕ ಯರಿಯೂರು ಸಿ.ರಾಜಣ್ಣ, ವಡಗೆರೆದಾಸ್, ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಸಿ.ಕೃಷ್ಣಮೂರ್ತಿ, ಮಾದೇಶ್, ಮಾಂಬಳ್ಳಿ ರಾಮು, ವೆಂಕಟೇಶ್, ಮಲ್ಲು, ಮಂಜುನಾಥ್, ಹೊನ್ನೂರು ಚಿನ್ನಪ್ಪ, ಜೆ. ಶ್ರೀನಿವಾಸ್, ನಂಜುಂಡಸ್ವಾಮಿ, ಪುಟ್ಟರಾಜು, ಗ್ರಾಮಸ್ಥರು, ಯಜಮಾನರು ಮಧು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.