ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಬೆಟ್ಟದಲ್ಲಿ ಸ್ವಚ್ಛತೆ ಕಾಪಾಡಲು ಸೂಚನೆ

ಮಹದೇಶ್ವರ ಬೆಟ್ಟದಲ್ಲಿ ವಿವಿಧ ಕಾಮಗಾರಿಗಳ ಪರಿಶೀಲನೆ
Published 23 ಫೆಬ್ರುವರಿ 2024, 14:10 IST
Last Updated 23 ಫೆಬ್ರುವರಿ 2024, 14:10 IST
ಅಕ್ಷರ ಗಾತ್ರ

ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟದ ಮಹದೇಶ್ವರಸ್ವಾಮಿ ದೇವಾಲಯ ಸೇರಿದಂತೆ ಪ್ರಾಧಿಕಾರದ ಕಾಮಗಾರಿಗಳ ಸ್ಥಳಕ್ಕೆ ಕಾರ್ಯದರ್ಶಿ ರಘು.ಎ.ಇ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಾಸೋಹ, ಸರತಿ ಸಾಲು, ಮುಡಿಕಟ್ಟೆ ಸೇರಿ ಶೌಚಗೃಹ ಹಾಗೂ ಪ್ರಾಧಿಕಾರದ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ್ದರು. ಬೆಟ್ಟದಲ್ಲಿ ಸಡಗರ ಸಂಭ್ರಮದಿಂದ ಜರುಗುವ ಮುಂಬರುವ ಮಹಾಶಿವರಾತ್ರಿ ಜಾತ್ರಾ ಪ್ರಯುಕ್ತ ಹಿನ್ನಲೆ ಅಧಿಕಾರಿಗಳ ಜೊತೆಗೂಡಿ ಕಾರ್ಯದರ್ಶಿ ರಘು.ಎ.ಈ ವಿವಿಧ ವಿಭಾಗದ ಸ್ಥಳ ಪರಿವೀಕ್ಷಿಸಿದರು.

ಬಳಿಕ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಜರುಗುತ್ತಿರುವ ಕಾಮಗಾರಿಗಳ ಪ್ರಗತಿ ಬಗ್ಗೆ
ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮವಹಿಸುವಂತೆ ಕಾರ್ಯದರ್ಶಿ ರಘು.ಎ.ಈ ಸೂಚನೆ ನೀಡಿದರು.

‘ನಂತರ ಸನ್ನಿಧಿಗೆ ಬರುವ ಭಕ್ತರಿಗೆ ಅನುಕೂಲವಾಗುವಂತೆ ಅಗತ್ಯ ಮೂಲಕ ಸೌಕರ್ಯ ಒದಗಿಸುವ ಜೊತೆಗೆ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಶ್ರಮಿಸಬೇಕು’ ಎಂದು ತಾಕೀತು ಮಾಡಿದರು.

ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ, ದರ್ಶನಕ್ಕೆ ತೆರಳಲು ಸರತಿ ಸಾಲು ವ್ಯವಸ್ಥೆ ಸೇರಿದಂತೆ ಲಾಡುಪ್ರಸಾದ ವಿತರಣೆ, ದಾಸೋಹ ವಿನಿಮಯ, ಕುಡಿಯುವ ನೀರು ವ್ಯವಸ್ಥೆ ಸಮರ್ಪಕವಾಗಿ ಆಗಬೇಕು.

ದರ್ಶನಕ್ಕೆ ತೆರಳುವ ಭಕ್ತರಲ್ಲಿ ನೂಕು ನುಗ್ಗಲು ಉಂಟಾಗದಂತೆ ನೋಡಿಕೊಳ್ಳಬೇಕು. ಕ್ಷೇತ್ರ ಆವರಣ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಅಧಿಕಾರಿಗಳಿಗೆ ಇದೆ ವೇಳೆ ಸಲಹೆ ನೀಡಿದರು. ಮುಡಿ ತೆಗೆಯಲು ನಿಗಧಿತ ಹಣ ಮಾತ್ರ ಪಡೆಯಬೇಕು ಹೆಚ್ಚುವರಿ ಹಣ ಪಡೆಯಬಾರದು ಎಂದು ಎಚ್ಚರಿಸಿದರು.

 ಮಹದೇಶ್ವರಬೆಟ್ಟದಲ್ಲಿ ಭಕ್ತರಿಗೆ ಅನುಕೂಲ ಕಲ್ಪಿಸಲು ಅಗತ್ಯ ಮೂಲ ಸೌಕರ್ಯ ಒದಗಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಬೇಸಿಗೆ ತಾಪಮಾನ ಹಿನ್ನಲೆ ಸರತಿ ಸಾಲಿನಲ್ಲಿ ಗಾಳಿಚಕ್ರ ಅಳವಡಿಸಲಾಗಿದೆ. ಜಾತ್ರಾ ಹಿನ್ನಲೆ ಈಗಾಗಲೇ ಸ್ಥಳ ಪರಿಶೀಲನೆ ಮಾಡಿದ್ದು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT