ಶುಕ್ರವಾರ, ಮಾರ್ಚ್ 5, 2021
30 °C

ಮಹಿಳಾ ಠಾಣೆ ಇನ್‌ಸ್ಪೆಕ್ಟರ್‌ ಬಿ.ಪುಟ್ಟಸ್ವಾಮಿಗೆ ರಾಷ್ಟ್ರಪತಿ ಪದಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಗೆ ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿಗಳ ಪದಕಕ್ಕೆ ನಗರದ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಬಿ.ಪುಟ್ಟಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಪುಟ್ಟಸ್ವಾಮಿ ಸೇರಿದಂತೆ ರಾಜ್ಯದ 19 ಮಂದಿ ಪೊಲೀಸರು ರಾಷ್ಟ್ರಪತಿ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ. ಪೊಲೀಸರು ಸಲ್ಲಿಸಿರುವ ಉತ್ತಮ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಗಳ ಪದಕಕ್ಕೆ ಆಯ್ಕೆ ಮಾಡಲಾಗುತ್ತದೆ.

ಪುಟ್ಟಸ್ವಾಮಿ ಅವರು ಜಿಲ್ಲೆಯ ಕೊಳ್ಳೇಗಾಲ ಗ್ರಾಮಾಂತರ, ಚಾಮರಾಜನಗರ ಪೂರ್ವ ಠಾಣೆಗಳಲ್ಲಿ ಸಬ್ ಇನ್‌ಸ್ಪೆಕ್ಟರ್ ಆಗಿ, ಜಿಲ್ಲಾ ಸೈಬರ್ ಅಪರಾಧ, ಆರ್ಥಿಕ ಮತ್ತು ಮಾದಕದ್ರವ್ಯ ನಿಗ್ರಹ ಠಾಣೆಯ ಇನ್‌ಸ್ಪೆಕ್ಟರ್ ಆಗಿ ಅವರು ಸೇವೆ ಸಲ್ಲಿಸಿದ್ದಾರೆ.

ಕಳೆದ ವರ್ಷದ ಮೇನಲ್ಲಿ ಅವರು ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಯಿಂದ ಇನ್‌ಸ್ಪೆಕ್ಟರ್‌ ಆಗಿ ಬಡ್ತಿಹೊಂದಿದ್ದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು