ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದಕ ವ್ಯಸನದಿಂದ ದೂರವಿರಿ: ಹೊನ್ನಸ್ವಾಮಿ

ಅಂತರರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ
Last Updated 3 ಜುಲೈ 2022, 2:08 IST
ಅಕ್ಷರ ಗಾತ್ರ

ಚಾಮರಾಜನಗರ: ಮಾದಕ ವ್ಯಸನದಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ದೂರವಿರುವುದು ಆರೋಗ್ಯ ಮತ್ತು ಸಮಾಜಕ್ಕೆ ಉತ್ತಮ ಎಂದು ಸಿವಿಲ್ ನ್ಯಾಯಾಧೀಶ ಬಿ.ಎಸ್.ಹೊನ್ನಸ್ವಾಮಿ ಅವರು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ವಿದ್ಯಾರ್ಥಿಗಳು ಹಾಗೂ ಯುವ ಪೀಳಿಗೆ ಮಾದಕ ವ್ಯಸನದಂತಹ ದುಶ್ಚಟಕ್ಕೆ ಬಲಿಯಾಗಿ ಅಡ್ಡದಾರಿ ಹಿಡಿಯುವುದರಿಂದ ತಮ್ಮ ಅಮೂಲ್ಯವಾದ ಜೀವ, ಜೀವನ ನಾಶ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತು ಪೊಲೀಸ್ ಇಲಾಖೆಯ ಪಾತ್ರವೂ ಪ್ರಮುಖವಾಗಿದೆ’ ಎಂದರು.

ಸೈಬರ್‌, ಆರ್ಥಿಕ ಅಪರಾಧ ಹಾಗೂ ಮಾದಕ ದ್ರವ್ಯ ತಡೆ ಠಾಣೆಯ ಇನ್‌ಸ್ಪೆಕ್ಟರ್‌ ಮಹದೇವಶೆಟ್ಟಿ ಮಾತನಾಡಿ, ‘ಮಕ್ಕಳನ್ನು ಒಬ್ಬಂಟಿಯಾಗಲು ಬಿಡಬೇಡಿ. ಏಕಾಂಗಿತನವೂ ಮಾದಕ ವ್ಯಸನಕ್ಕೆ ಕರೆದೊಯುತ್ತದೆ. ಮಾದಕ ಪದಾರ್ಥಗಳನ್ನು ಸೇವಿಸಿ ದಾಸರಾಗುವುದರಿಂದ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿಯೂ ತೊಡಗಲು ಕಾರಣವಾಗಬಹುದು. ಕೊನೆಯಲ್ಲಿ ಕಷ್ಟ ಅನುಭವಿಸಬೇಕಾಗುತ್ತದೆ’ ಎಂದು ಹೇಳಿದರು.

ಮನೋರೋಗ ತಜ್ಞರಾದ ಡಾ.ರಾಜೇಶ್ ಮಾತನಾಡಿ, ‘ಯುವ ಜನತೆಯು ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ ಹಾಗೂ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವುದಲ್ಲದೇ ಪ್ರಾಣ ಕಳೆದುಕೊಳ್ಳುವ ಹಂತಕ್ಕೆ ಬರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ವಹಿಸುವುದು ಒಳಿತು’ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ ಮಾತನಾಡಿ, ‘ಯುವಜನರಿಗೆ ಮಾದಕ ವಸ್ತುಗಳ ಸೇವನೆ ಆಧುನಿಕತೆಯ ಆಕರ್ಷಣೀಯವೆನಿಸಿದೆ. ಆದರೆ ಇದರ ಗಂಭೀರ ಪರಿಣಾಮಗಳ ಬಗ್ಗೆ ಆರಂಭದಲ್ಲಿಯೇ ಎಚ್ಚರಿಸುವುದರಿಂದ ವಿದ್ಯಾರ್ಥಿಗಳನ್ನು ವ್ಯಸನ ಮುಕ್ತರಾಗಿಸಬಹುದು’ ಎಂದರು.

ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಚಂದ್ರಶೇಖರ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಅಂಕಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಆರೋಗ್ಯ ಶಿಕ್ಷಣ ಅಧಿಕಾರಿ ದೊರೆಸ್ವಾಮಿ ನಾಯಕ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT