ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವಹಕ್ಕುಗಳ ಅರಿವು ಅವಶ್ಯಕ : ಶ್ರೀಕಾಂತ್

ಸಿಕ್ರಂ ಸಂಸ್ಥೆಯಿಂದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ
Published 11 ಡಿಸೆಂಬರ್ 2023, 8:40 IST
Last Updated 11 ಡಿಸೆಂಬರ್ 2023, 8:40 IST
ಅಕ್ಷರ ಗಾತ್ರ

ಚಾಮರಾಜನಗರ: ವಿದ್ಯಾರ್ಥಿಗಳು, ಸಾರ್ವಜನಿಕರಲ್ಲಿ ಮಾನವ ಹಕ್ಕುಗಳ ಕುರಿತು ಅರಿವು ಮೂಡಿಸುವುದು ಅವಶ್ಯಕ ಎಂದು ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಶ್ರೀಕಾಂತ್ ಭಾನುವಾರ ಹೇಳಿದರು.

ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಿಂಭಾಗದಲ್ಲಿರುವ ಸರ್ಕಾರಿ ವರ್ಗೀಕೃತ ಕಾಲೇಜು ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ದಕ್ಷಿಣ ಭಾರತ ಮಾನವ ಹಕ್ಕುಗಳ ಶಿಕ್ಷಣ ಮತ್ತು ಸಂರಕ್ಷಣಾ ಘಟಕ ಚಾಮರಾಜನಗರ ಹಾಗೂ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ  ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. 

‘ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಭಾರತ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಅದರಲ್ಲಿ ಮಾನವ ಹಕ್ಕುಗಳ ವಿವರಗಳಿವೆ. ಭಾರತ ಪ್ರಜೆಯಾದ ಪ್ರತಿ ವ್ಯಕ್ತಿಯೂ ಈ ಭೂಮಿ ಮೇಲೆ ಸಮಾನತೆ, ಸ್ವಾತಂತ್ರ್ಯದಿಂದ ಗೌರಯುತವಾಗಿ ಬದುಕಬೇಕಾದರೆ ಮಾನವ ಹಕ್ಕುಗಳು ಅವಶ್ಯಕವಾಗಿದೆ’ ಎಂದರು.

‘1948ರ ಡಿಸೆಂಬರ್‌ 10ರಂದು ವಿಶ್ವ ಮಾನವಹಕ್ಕುಗಳ ಬಗ್ಗೆ ಒಪ್ಪಂದ ಮಾಡಿಕೊಂಡು ಮಾನವ ಹಕ್ಕು ದಿನಾಚರಣೆ ಆಚರಣೆ ಮಾಡಲಾಗುತ್ತಿದೆ. ಮಾನವಹಕ್ಕುಗಳ ಉಲ್ಲಂಘನೆಯಾದಂತಹ ಸಂದರ್ಭದಲ್ಲಿ ಪೊಲೀಸ್ ಠಾಣೆಯ ಮಟ್ಟದವರೆಗೂ ಹೋರಾಟ ಮಾಡಿ ಪರಿಹಾರ ಕೊಡಿಸುಸುವ ಕೆಲಸವನ್ನು ಸಿಕ್ರಂ ಸಂಸ್ಥೆ ಮಾಡುತ್ತಾ ಬಂದಿದೆ’ ಶ್ರೀಕಾಂತ್‌ ಮೆಚ್ಚುಗೆ ವ್ಯಕ್ತಪಡಿಸಿದರು. 

ಸಿಕ್ರಂ ಸಂಸ್ಥೆ ಜಿಲ್ಲಾ ಸಂಯೋಜಕ ಕೆ.ಸಿ.ರೇವಣ್ಣ ಮಾತನಾಡಿ, ‘ಭಾರತ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕು ಇದೆ. ಹಾಗಾಗಿ ಮಾನವಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳುವುದು ಅವಶ್ಯಕ. ಅಂಬೇಡ್ಕರ್‌ ಅವರು ಮಹಿಳೆಯರಿಗೂ ಸಮಾನತೆ ಹಕ್ಕು ನೀಡಿದ್ದಾರೆ’ ಎಂದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಚಿಕ್ಕಬಸವಯ್ಯ, ಜನಹಿತಾಶಕ್ತಿ  ಹೋರಾಟ ವೇದಿಕೆ ಜಿಲ್ಲಾಧ್ಯಕ್ಷ ರಾಮಸಮುದ್ರ ಸುರೇಶ್,  ವಕೀಲರಾದ ಎಂ.ಮಹೇಶ್, ಸವಿತಾ, ನಿಲಯಪಾಲಕಿ ಶಿವಮ್ಮ ಹಾಗೂ ವಿದ್ಯಾರ್ಥಿಗಳು ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT