ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದೃಢ ಸಮಾಜ ನಿರ್ಮಾಣಕ್ಕೆ ‘ಸ್ತ್ರೀ’ ಶಕ್ತಿ

ನ್ಯಾಯಾಲಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ, ಜಿಲ್ಲಾ ಪ್ರಧಾನ ನ್ಯಾಯಾಧೀಶರು ಭಾಗಿ
Last Updated 9 ಮಾರ್ಚ್ 2020, 15:15 IST
ಅಕ್ಷರ ಗಾತ್ರ

ಚಾಮರಾಜನಗರ: ‘ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಕೊಡುಗೆ ಅಪಾರ. ಸ್ತ್ರೀಯರುಪ್ರತಿಯೊಂದು ರಂಗದಲ್ಲೂ ಬೆಳವಣಿಗೆ ಹೊಂದಿ ಸಮಾಜದ ಕೈಗನ್ನಡಿಯಾಗಬೇಕು’ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಡಿ.ವಿ.ಪಾಟೀಲ ಅವರು ಆಶಿಸಿದರು.

ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯ ಸಹಯೋಗದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮಹಿಳೆ ಭೂಮಿಯಂತೆ ತ್ಯಾಗಮಯಿ.ಭಾರತೀಯ ಸಂಸ್ಕೃತಿಯ ಪ್ರತಿಬಿಂಬವೂ ಹೌದು. ಸಮಾಜದಲ್ಲಿ ಎಲ್ಲರೂ ಆಕೆಯನ್ನು ಪೂಜ್ಯನೀಯ ಭಾವನೆಯಿಂದ ನೋಡಬೇಕು’ ಎಂದು ಕರೆ ನೀಡಿದರು.

‘ಇಂದಿನ ದಿನಗಳಲ್ಲಿ ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ಛಾಪು ಮೂಡಿಸುತ್ತಿದ್ದಾರೆ. ಪುರುಷರಿಗೆ ಸರಿ ಸಮಾನಾಗಿ ಹೆಜ್ಜೆ ಹಾಕುತ್ತಿರುವ ಮಹಿಳೆಯರು, ಕುಟುಂಬ ನಿರ್ವಹಣೆಯಲ್ಲಿ ಅತ್ಯಂತ ಮಹತ್ವದ ಜವಾಬ್ದಾರಿ ಹೊರುತ್ತಿದ್ದಾರೆ’ ಎಂದರು.

ಶಿಕ್ಷಣ ಮುಖ್ಯ:ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸಿ. ತೇಜೋವತಿ ಅವರು ಮಾತನಾಡಿ, ‘ಹೆಣ್ಣು ಸಮಾಜದಲ್ಲಿ ಗುರುತಿಸಿಕೊಳ್ಳಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಮಹಿಳೆಯರು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪಾರ ಸಾಧನೆ ಮಾಡಬೇಕು. ಸಮಾಜವು ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು’ ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಮಾತನಾಡಿದರು.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಡಿ. ವಿನಯ್, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಂ. ರಮೇಶ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಗಣಪತಿ ಜಿ. ಬಾದಾಮಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಸ್ಮಿತಾ ಎಸ್.ವಿ., ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್. ಮಂಜು ಹರವೆ, ಪಬ್ಲಿಕ್‌ ಪ್ರಾಸಿಕ್ಯೂಟರ್‌ಗಳಾದ ಲೋಲಾಕ್ಷಿ, ಎನ್.ಲೋಕೇಶ್, ಕೆ.ಯೋಗೇಶ್, ಜಿಲ್ಲಾ ನ್ಯಾಯಾಂಗ ನೌಕರರ ಸಂಘದ ಅಧ್ಯಕ್ಷರಾದ ವಿ. ಯಂಕನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT