ಚಾಮರಾಜನಗರ: ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವುದರಿಂದ ಜಿಲ್ಲೆಗೆ ಹೊಂದಿಕೊಂಡಿರುವ ಆರು ಅಂತರರಾಜ್ಯ ಚೆಕ್ಪೋಸ್ಟ್ಗಳನ್ನು ಜಿಲ್ಲಾಡಳಿತ ಮತ್ತೆ ಆರಂಭಿಸಿದೆ.

ಚೆಕ್ಪೋಸ್ಟ್ಗಳಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಸೂಚನೆ ನೀಡಿದರು.

ಕೋವಿಡ್ ನಿಯಂತ್ರಣ ಸಂಬಂಧ ನಡೆದ ಆರೋಗ್ಯ, ಕಂದಾಯ, ಪೊಲೀಸ್ ಇತರೆ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಕೇರಳದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ತಮಿಳುನಾಡಿನಲ್ಲಿಯೂ ಸೋಂಕು ಹೆಚ್ಚಾಗುತ್ತಿದೆ. ಜಿಲ್ಲೆಯು ಈ ಎರಡೂ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವುದರಿಂದ ಇಲ್ಲಿಯೂ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗರೂಕತೆ ವಹಿಸಬೇಕು. ಈ ಉದ್ದೇಶಕ್ಕಾಗಿ ಎಲ್ಲ ಆರು ಅಂತರರಾಜ್ಯ ಚೆಕ್ಪೋಸ್ಟ್ಗಳನ್ನು ಕೂಡಲೇ ಆರಂಭಿಸಲಾಗುತ್ತಿದೆ’ ಎಂದರು.

ಕಂದಾಯ, ಪೊಲೀಸ್, ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ತಕ್ಷಣವೇ ಕಾರ್ಯೋನ್ಮುಖಗೊಂಡು ಚೆಕ್ ಪೋಸ್ಟ್ ಹಾಗೂ ಗಡಿ ಭಾಗಗಳಲ್ಲಿ ತಪಾಸಣಾ ಕಾರ್ಯ ತೀವ್ರಗೊಳಿಸಬೇಕು. ಕೇರಳ ಹಾಗೂ ತಮಿಳುನಾಡು ರಾಜ್ಯಗಳಿಂದ ಜಿಲ್ಲೆಗೆ ಬರುವವರನ್ನು ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡಬೇಕು. ಈಗಾಗಲೇ ಕೇರಳ ಗಡಿ ಚೆಕ್ ಪೋಸ್ಟ್ನಲ್ಲಿ ಕಡ್ಡಾಯವಾಗಿ ಆರ್ಟಿಪಿಸಿಆರ್ ನೆಗೆಟಿವ್ ವರದಿ ಇರುವವರನ್ನು ಮಾತ್ರ ಜಿಲ್ಲೆಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ. ಜೊತೆಗೆ ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿರುವವರಿಗೆ ಮಾತ್ರ ಜಿಲ್ಲೆಗೆ ಬರಲು ಅನುಮತಿಸಲಾಗಿದೆ. ಈ ಕಾರ್ಯ ಕಟ್ಟುನಿಟ್ಟಾಗಿ ಮುಂದುವರೆಯಬೇಕು’ ಎಂದರು.

‘ಕೇರಳಕ್ಕೆ ಹೋಗಿ ಬರುತ್ತಿರುವ ಜಿಲ್ಲೆಯ ಸರಕು ಸಾಗಾಣೆ ವಾಹನ ಚಾಲಕರೂ 15 ದಿನಗಳಿಗೊಮ್ಮೆ ಕಡ್ಡಾಯವಾಗಿ ಆರ್ಟಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು. ತಮಿಳುನಾಡು ಗಡಿ ಭಾಗದ ಜಿಲ್ಲೆಯ ಚೆಕ್ಪೋಸ್ಟ್ಗಳಲ್ಲೂ ಕೂಡಲೇ ತಪಾಸಣೆ ಕಾರ್ಯ ಚುರುಕುಗೊಳಿಸಬೇಕು. ತಾಪಮಾನ ಇನ್ನಿತರ ತಪಾಸಣೆ ಮಾಡಬೇಕು. ಕೋವಿಡ್ ರೋಗ ಲಕ್ಷಣಗಳು ಇರುವವರು ಕಂಡು ಬಂದಲ್ಲಿ ವಾಪಸ್ ಕಳುಹಿಸಬೇಕು’ ಎಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.

ನೆರೆ ರಾಜ್ಯಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ಆಂದೋಲನ ಮಾದರಿಯಲ್ಲಿ ಕೈಗೊಂಡು ಅರ್ಹರೆಲ್ಲರು ಕೋವಿಡ್ ಲಸಿಕೆ ಪಡೆಯಲು ತಕ್ಷಣವೇ ಕ್ರಮವಹಿಸುವಂತೆ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ. ರವಿ, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜು, ಆರ್.ಸಿ.ಎಚ್ ಅಧಿಕಾರಿ ಡಾ. ವಿಶ್ವೇಶ್ವರಯ್ಯ, ಜಿಲ್ಲಾಸ್ಪತ್ರೆಯ ನೋಡೆಲ್ ಅಧಿಕಾರಿ ಡಾ. ಮಹೇಶ್, ಜಿಲ್ಲಾ ಸರ್ಜನ್ ಡಾ. ಶ್ರೀನಿವಾಸ್, ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಸುಗುಣ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.