ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಭೀಮ್ ಸಂವಿಧಾನ ಜಾಗೃತಿ ಜಾಥಾ ಸಮಾರೋಪ ನಾಳೆ

Last Updated 11 ನವೆಂಬರ್ 2022, 16:54 IST
ಅಕ್ಷರ ಗಾತ್ರ

ಚಾಮರಾಜನಗರ: ಬಹುಜನ ಸಮಾಜಪಕ್ಷವು (ಬಿಎಸ್‌ಪಿ) ಸಂವಿಧಾನ ಸಂರಕ್ಷಣೆಗಾಗಿ ರಾಜ್ಯವ್ಯಾಪಿ ಹಮ್ಮಿಕೊಂಡಿರುವ ಜೈಭೀಮ್ ಜನಜಾಗೃತಿ ಜಾಥಾದ ಸಮಾರೋಪ ಸಮಾರಂಭ ಭಾನುವಾರ (ನ.13) ನಗರದಲ್ಲಿ ನಡೆಯಲಿದೆ.

ಬಿಎಸ್‌ಪಿಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ನಾಗಯ್ಯ ಅವರು ಶುಕ್ರವಾರ ಸುದ್ದಿ ಗೋಷ್ಠಿಯಲ್ಲಿ ಸಮಾರಂಭದ ಬಗ್ಗೆ ಮಾಹಿತಿ ನೀಡಿದರು.

‘ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಬೆಳಿಗ್ಗೆ‌ 10 ಗಂಟೆಗೆ ಸಮಾರಂಭ ನಡೆಯಲಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಂ.ಕೃಷ್ಣಮೂರ್ತಿ, ರಾಜ್ಯ ಉಸ್ತವಾರಿಗಳಾದ ಮಾರಸಂದ್ರ ಮುನಿಯಪ್ಪ, ಗೋಪಿನಾಥ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ. ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಇದರಲ್ಲಿ ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.

‘ಸಂವಿಧಾನ ಸಂರಕ್ಷಣೆಗಾಗಿ ಜನರಲ್ಲಿ ಜಾಗೃತಿ ‌ಮೂಡಿಸುವ ಉದ್ದೇಶದಿಂದ ಜಾಗೃತಿ ಜಾಥಾಗೆ ಅ.28ರಂದು ರಾಮನಗರದಲ್ಲಿ ಚಾಲನೆ ನೀಡಲಾಗಿತ್ತು. ರಾಜ್ಯದಾದ್ಯಂತ ಎಲ್ಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜಾಥಾ ಸಂಚರಿಸಿದ್ದು, ಗುರುವಾರ ಕೊಳ್ಳೇಗಾಲ ಪ್ರವೇಶಿಸಿದೆ’ ಎಂದು ಹೇಳಿದರು.

‘ಭಾನುವಾರ ಸಂತೇಮರಹಳ್ಳಿ ವೃತ್ತದ ಮೂಲಕ ಜಾಥಾ ನಗರ ಪ್ರವೇಶಿಸಲಿದ್ದು, ಅಲ್ಲಿಂದ ಡೀವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ರಾಮಸಮುದ್ರದವರೆಗೂ ಸಾಗಿ ಅಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಪೇಟೆ ಪ್ರೈಮರಿ ಶಾಲೆ ಆವರಣಕ್ಕೆ ತಲುಪಲಿದೆ’ ಎಂದರು.

‘ಅಂಬೇಡ್ಕರ್‌ ಅವರು ರಚಿಸಿರುವ ದೇಶದ ಸಂವಿಧಾನದ ಆಶಯಗಳು ಸಂಪೂರ್ಣವಾಗಿ ಜಾರಿಯಾಗಿಲ್ಲ. ಅಸಮಾನತೆ, ಅಸ್ಪೃಶ್ಯತೆ ಇನ್ನೂ ಜಾರಿಯಲ್ಲಿದೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಪರಿಕಲ್ಪನೆ ಅನುಷ್ಠಾನಕ್ಕೆ ಬಂದಿಲ್ಲ. ಸಂವಿಧಾನ ಪೂರ್ಣವಾಗಿ ಜಾರಿಗೆ ಬಂದಿದ್ದೇ ಆದರೆ ದೇಶದಲ್ಲಿ ಬಡವರೇ ಇರುವುದಿಲ್ಲ. ಕನಿಷ್ಠ 20 ವರ್ಷ ಜಾರಿಗೆ ತಂದರೂ ಸಾಕು; ಎಲ್ಲ ಸಮಸ್ಯೆಗಳೂ ಬಗೆಹರಿಯುತ್ತವೆ' ಎಂದು ನಾಗಯ್ಯ ಹೇಳಿದರು.

ಬಿಎಸ್‌ಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ಕ್ಷೇತ್ರ ಸಂಯೋಜಕ ಮಹೇಶ್, ಮುಖಂಡರಾದ ರಂಗಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT