ಚಾಮರಾಜನಗರ: ತಾಲ್ಲೂಕಿನ ಸಂತೇಮರಹಳ್ಳಿ, ಬಸವಟ್ಟಿ ಮತ್ತು ಬಾಣಹಳ್ಳಿ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಭೇಟಿನೀಡಿ ಜಲ ಜೀವನ್ ಮಿಷನ್ ಹಾಗೂ ನರೇಗಾ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದ ಸಿಇಒ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿದರು. ಚಾಮರಾಜನಗರ ತಾಲ್ಲೂಕಿನಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 483 ಕಾಮಗಾರಿಗಳು ನಡೆದಿದ್ದು ಈವರೆಗೆ 391 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 101 ಕಾಮಗಾರಿಗಳನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದೆ. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಜೆಜೆಎಂ ಯೋಜನೆಯಡಿ ಅಳವಡಿಸಿರುವ ಗೃಹನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ, ನೀರಿನ ಗುಣಮಟ್ಟ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಮತ್ತು ಕಾರ್ಯಾಚರಣೆ, ನಿರ್ವಹಣೆ, ನೀರು ಸರಬರಾಜು ಬಗ್ಗೆ ಪರಿಶೀಲಿಸಿ ಕುರಿತು ವರದಿಗಳನ್ನು ಸಿಇಒ ಅವರು ಪರಿಶೀಲಿಸಿ, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದರು.

ಬಳಿಕ ಬಾಣಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ನರೇಗಾ ಯೋಜನೆಯಡಿ ತೆಗೆದುಕೊಂಡಿರುವ ಶಾಲಾ ಸುತ್ತುಗೋಡೆ, ಶೌಚಾಲಯ ಕಾಮಗಾರಿಯನ್ನು ಪರಿಶೀಲಿಸಿ, ಶಾಲಾ ಮಕ್ಕಳ ಕುಂದು ಕೊರತೆಗಳನ್ನು ಆಲಿಸಿದರು.

ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗದ ಪ್ರಭಾರ ಕಾರ್ಯಪಾಲಕ ಎಂಜಿನಿಯರ್ ಎಸ್.ಜಗದೀಶ್, ಸಹಾಯಕ ಎಂಜಿನಿಯರ್ ಪುರುಷೋತ್ತಮ್, ಜೆಜೆಎಂ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕಿ ಸಿ.ಎಂ.ಆಶಾ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.