ಮಂಗಳವಾರ, ಸೆಪ್ಟೆಂಬರ್ 17, 2019
24 °C
ನೀರಿನ ಮಹತ್ವದ ಬಗ್ಗೆ ಜನಜಾಗೃತಿ

ನಗರಸಭೆ: ಜಲಶಕ್ತಿ ಅಭಿಯಾನಕ್ಕೆ ಚಾಲನೆ

Published:
Updated:
Prajavani

ಚಾಮರಾಜನಗರ: ನೀರಿನ ಸದ್ಬಳಕೆ ಹಾಗೂ ನೀರಿನ ಮಹತ್ವದ ಬಗ್ಗೆ ಜನಜಾಗೃತಿ ಮೂಡಿಸಲು ನಗರಸಭೆ ಹಮ್ಮಿಕೊಂಡಿರುವ ಜಲಶಕ್ತಿ ಅಭಿಯಾನಕ್ಕೆ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಗುರುವಾರ ಚಾಲನೆ ನೀಡಿದರು. 

ಅಭಿಯಾನಕ್ಕೆ ಸಂಬಂಧಿಸಿದ ಫಲಕದಲ್ಲಿ ಸಹಿಹಾಕುವ ಮೂಲಕ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು.

‘ಕೇಂದ್ರ ಸರ್ಕಾರವು ಜಲಶಕ್ತಿ ಅಭಿಯಾನವನ್ನು ಜಾರಿಗೆ ತಂದಿದ್ದು, ಯೋಜನೆ ಅನುಷ್ಠಾನಕ್ಕೆ ದೇಶದ 256 ಜಿಲ್ಲೆಗಳನ್ನು ಹಾಗೂ 756 ನಗರ ಸ್ಥಳೀಯ ಸಂಸ್ಥೆಗಳನ್ನು ಗುರುತಿಸಲಾಗಿದೆ. ನೀರಿನ ಕೂರತೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು, ನೀರಿನ ಸಂರಕ್ಷಣೆ ಮತ್ತು ಪುನಶ್ಚೇತನ, ಮರುಪೂರಣ ಹಾಗೂ ಮರು ಬಳಕೆ ಮಾಡುವುದು ಅತ್ಯಂತ ಮುಖ್ಯ’ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಅದ್ಯಕ್ಷೆ ಶಿವಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷೆ ಮರುಗದಮಣಿ, ಸದಸ್ಯ ಕೆರೆಹಳ್ಳಿ ನವೀನ್, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌.ಲತಾಕುಮಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್.ಡಿ. ಆನಂದ ಕುಮಾರ್, ನಗರಸಭೆ ಆಯುಕ್ತ ರಾಜಣ್ಣ, ಎಇಇ ಸತ್ಯಮೂರ್ತಿ, ಪರಿಸರ ಎಂಜಿನಿಯರ್‌ ಗಿರಿಜಾ, ಎಂಜಿನಿಯರ್‌ ಸುಬ್ರಹ್ಮಣ್ಯ ಇದ್ದರು.

Post Comments (+)