ಚಾಮರಾಜನಗರ: ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ‘ಜಾನಪದ ಜಾತ್ರೆ’ ಕಾರ್ಯಕ್ರಮ ಫೆ.21ರಂದು ಆಯೋಜಿಸಲಾಗಿದ್ದು ಅಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಾನಪದ ಜಾತ್ರೆ ಆಯೋಜನೆ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶೇಷ ಘಟಕ ಉಪಯೋಜನೆಯಡಿ ನಡೆಯುತ್ತಿರುವ ಜಾನಪದ ಜಾತ್ರೆಯಲ್ಲಿ ಜಾನಪದ ಕಲೆಗಳ ವಿವಿಧ ಪ್ರಕಾರಗಳ ಪ್ರದರ್ಶನ ಹಮ್ಮಿಕೊಳ್ಳಲಾಗುವುದು ಎಂದರು.

ಪರಿಶಿಷ್ಟ ಜಾತಿ, ಸಮುದಾಯಗಳ ಕಲೆಗಳನ್ನು ಪುನಶ್ಚೇತನಗೊಳಿಸಿ ಮತ್ತು ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜಾನಪದ ಜಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವಿಧ ಪ್ರಕಾರದ ಜಾನಪದ ಕಲೆಗಳನ್ನು ಒಂದೇ ಸೂರಿನಡಿ ಪ್ರದರ್ಶಿಸಲು ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.

ರಾಜ್ಯಮಟ್ಟದ ಜಾನಪದ ಜಾತ್ರೆ ಕಾರ್ಯಕ್ರಮ ಆಯೋಜನೆಗೆ ಮಲೆ ಮಹದೇಶ್ವರಬೆಟ್ಟ ಆಯ್ಕೆಯಾಗಿರುವುದು ಜಿಲ್ಲೆಗೆ ದೊರೆತಿರುವ ಅವಕಾಶವಾಗಿದ್ದು ಸದುಪಯೋಗಪಡಿಸಿಕೊಳ್ಳಬೇಕು. ರಾಜ್ಯದ ವಿವಿಧ ಜಾನಪದ ಕಲಾತಂಡಗಳು 40ರಿಂದ 45 ವಿವಿಧ ಕಲಾ ಪ್ರಕಾರಗಳ ಪ್ರದರ್ಶನಕ್ಕೆ ಅವಕಾಶ ಸಿಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಾನಪದ ಜಾತ್ರೆ ಕಾರ್ಯಕ್ರಮ ಮಲೆಮಹದೇಶ್ವರ ಬೆಟ್ಟದ ರಂಗಮಂದಿರದಲ್ಲಿ ಫೆ.21ರಂದು ಸಂಜೆ ನಡೆಯಲಿದೆ. ಜಿಲ್ಲೆಯ ಜಾನಪದ ಕಲಾವಿದರಿಗೆ ಕಲೆಗಳ ಪ್ರದರ್ಶನಕ್ಕೆ ಹೆಚ್ಚಿನ ಅವಕಾಶ ಹಾಗೂ ಆದ್ಯತೆ ನೀಡಬೇಕು. ರಾಜ್ಯದ ವಿವಿಧ ಭಾಗಗಳಿಂದ 500ಕ್ಕೂ ಹೆಚ್ಚು ಕಲಾವಿದರು ಭಾಗವಹಿಸುವ ನಿರೀಕ್ಷೆಯಿದ್ದು ಎಲ್ಲ ಕಲಾವಿದರಿಗೆ ವಾಸ್ತವ್ಯ, ಊಟೋಪಚಾರ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕಲಾ ಪ್ರದರ್ಶನಕ್ಕೆ ಬೃಹತ್ ವೇದಿಕೆ ಸಜ್ಜು ಮಾಡಬೇಕು, ಗುಣಮಟ್ಟದ ಧ್ವನಿ, ಬೆಳಕು, ವಿನ್ಯಾಸದ ವ್ಯವಸ್ಥೆ ಇರಬೇಕು. ಕಲಾವಿದರು ಪ್ರದರ್ಶನ ನೀಡಿದ 24 ಗಂಟೆಯೊಳಗೆ ಸಂಭಾವನೆ ಕಲಾವಿದರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಬೇಕು. ಕಲಾ ಪ್ರದರ್ಶನ ಹಾಗೂ ತಾಲೀಮಿಗೆ ಕಲಾವಿದರು ಮುಂಚಿತವಾಗಿಯೇ ಆಗಮಿಸಲಿದ್ದು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಚಾಮರಾಜನಗರ ಜಿಲ್ಲೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್, ಜಾನಪದ ಜಾತ್ರೆ ಕಾರ್ಯಕ್ರಮದ ಪ್ರಧಾನ ನಿರ್ದೇಶಕ ಕುಂತೂರು ಕುಮಾರ್, ನಿರ್ದೇಶಕ ಹನುಮಂತನಾಯಕ, ಸಂಚಾಲಕ ಡಾ.ಸಬ್ಬನಹಳ್ಳಿ ರಾಜು, ಕೆ.ನಾಗರಾಜು, ಎಚ್.ಸಿ.ನಿಂಗರಾಜು, ಬಿ. ಅನಿಲ್ ಕುಮಾರ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಯೋಗಾನಂದ್, ಹನೂರು ತಹಶೀಲ್ದಾರ್ ಗುರುಪ್ರಸಾದ್, ತಾಲ್ಲೂಕು ಪಂಚಾಯಿತಿ ಇಒ ಉಮೇಶ್ ಹಾಗೂ ಅಧಿಕಾರಿಗಳು ಇದ್ದರು.

‘ಗೊಂದಲ ಆಗದಿರಲಿ’

ಜಾನಪದ ಜಾತ್ರೆ ಸುಸೂತ್ರವಾಗಿ ನಡೆಯಲು ವಿವಿಧ ಸಮಿತಿಗಳನ್ನು ರಚನೆ ಮಾಡಿ ಜವಾಬ್ದಾರಿ ವಹಿಸಲಾಗಿದೆ. ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆ ಮುದ್ರಣ ಸಹಿತ ಇನ್ನಿತರ ಪ್ರಕ್ರಿಯೆಗಳು ನಡೆಯಬೇಕು. ಗೊಂದಲಕ್ಕೆ ಅವಕಾಶವಾಗದಂತೆ ಮುಂಚಿತವಾಗಿಯೇ ಎಲ್ಲ ಸಿದ್ದತೆ ಮಾಡಿಕೊಳ್ಳಬೇಕು. ರಾಜ್ಯಮಟ್ಟದ ಜಾನಪದ ಜಾತ್ರೆ ಯಶಸ್ವಿಗೊಳಿಸಲು ಹೊಣೆಗಾರಿಕೆಯಿಂದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.