ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ನೌಕರರ ಬೃಹತ್‌ ಜಾಥಾ

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿ.10ರಿಂದ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
Last Updated 5 ಡಿಸೆಂಬರ್ 2019, 13:42 IST
ಅಕ್ಷರ ಗಾತ್ರ

ಚಾಮರಾಜನಗರ: ‘ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಿ, ವೇಳಾಪಟ್ಟಿಯಲ್ಲಿ 3 ಗಂಟೆ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ಗುರುವಾರ ಬೃಹತ್‌ ಜಾಥಾ ನಡೆಯಿತು.

ಬಹಿರಂಗ ಸಭೆ: ಜಿಲ್ಲೆಯ ಎಲ್ಲ ಅಂಗನವಾಡಿ ನೌಕರರು ಮೆರವಣಿಗೆಗೂ ಮೊದಲು ನಗರದ ಹಳೇ ಖಾಸಗಿ ಬಸ್‌ ನಿಲ್ದಾಣದಲ್ಲಿರುವ ಮಾರಿಗುಡಿ ಮುಂಭಾಗದಲ್ಲಿ ಬಹಿರಂಗ ಸಭೆ ನಡೆಸಿದರು. ಬಳಿಕ ಅಲ್ಲಿಂದ ದೊಡ್ಡ ಅಂಗಡಿ ಬೀದಿ ಮಾರ್ಗವಾಗಿ ಭುವನೇಶ್ವರಿ ವೃತ್ತ, ಬಿ. ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಮೆರವಣಿಗೆ ನಡೆಸಿ ಜಿಲ್ಲಾಡಳಿತ ಭವನದ ಮುಂಭಾಗಘೋಷಣೆ ಕೂಗಿದರು. ನಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್‌.ಬಿ. ನಾರಾಯಣರಾವ್‌ ಅವರಿಗೆ ಮನವಿ ಸಲ್ಲಿಸಿದರು.

ಸಮಾಜ ಬದಲಾವಣೆ ಬಯಸುತ್ತಿದೆ. ಆದರೆ, ಅಂಗನವಾಡಿ ಕೇಂದ್ರಗಳು ಮಾತ್ರ ಹಳೆ ರೀತಿಯಲ್ಲೇ ಮುಂದುವರಿಯುತ್ತಿವೆ.ಮೂರೂವರೇವರ್ಷ ಮೇಲ್ಪಟ್ಟ ಮಕ್ಳಳಿಗೆಸರ್ಕಾರಿಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲಾಗಿದೆ. ಇದರಿಂದ ಅಂಗನವಾಡಿ ಕೇಂದ್ರಗಳು ಮುಚ್ಚುವ ಅಪಾಯವಿದೆ. ಆದ್ದರಿಂದ ಅಂಗನವಾಡಿ ಕೇಂದ್ರಗಳಲ್ಲೇ ಶಾಲಾ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಪಿರಿಯಾಡಿಕಲ್ ಲೇಬರ್ ಫೋರ್ಸ್ ಸಮೀಕ್ಷೆ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಮಹಿಳಾ ನಿರುದ್ಯೋಗ ಹೆಚ್ಚುತ್ತಿದೆ. ಮಾತ್ರವಲ್ಲದೆ ನಿಗದಿತ ಸಂಬಳ ತೆಗೆದುಕೊಳ್ಳುವವರು ಶೇ 26ರಷ್ಟುಮಾತ್ರ. ಉಳಿದವರು ಸ್ವಯಂ ಉದ್ಯೋಗ, ಅರೆಕಾಲಿಕ, ಸಾಂದರ್ಭಿಕ, ಗುತ್ತಿಗೆ ಇತರೆ ಉದ್ಯೋಗಿಗಳಾಗಿದ್ದಾರೆ.

ಅಂಗನವಾಡಿಕೇಂದ್ರಗಳನ್ನು ಪಾಲನಾ ಮತ್ತು ಕಲಿಕೆಯ ಕೇಂದ್ರಗಳನ್ನಾಗಿಸಬೇಕು. ಈಗಿರುವಅಂಗನವಾಡಿಕೇಂದ್ರ ವೇಳಾಪಟ್ಟಿಯಲ್ಲಿ 3 ಗಂಟೆ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು.ಅಂಗನವಾಡಿಕೇಂದ್ರಗಳಲ್ಲಿ ಮಾತೃಪೂರ್ಣ ಯಶಸ್ವಿ ಮಾಡಲು ಹೆಚ್ಚುವರಿ ಸಹಾಯಕಿಯರನ್ನು ನಿಯೋಜನೆ ಮಾಡಬೇಕು ಎಂದು ತಿಳಿಸಿದ್ದಾರೆ.

ಪ್ರತಿಭಟನಾ ಮೆರವಣಿಗೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಾಗಮಣಿ, ಖಜಾಂಚಿ ಜಿ.ಭಾಗ್ಯ,ಜಿಲ್ಲಾ ಕಾರ್ಯದರ್ಶಿ ಶಹಿದಾ ಬಾನು, ಸಹ ಕಾರ್ಯದರ್ಶಿ ಕೊಳ್ಳೇಗಾಲ ಶಾಂತಮ್ಮ, ಎ.ನಾಗಮಣಿ ಸೇರಿದಂತೆ ಜಿಲ್ಲೆಯ ಅಂಗನವಾಡಿ ನೌಕರರು ಪಾಲ್ಗೊಂಡಿದ್ದರು.

10ರಿಂದ ಅನಿರ್ದಿಷ್ಟಾವಧಿ ಮುಷ್ಕರ
‘ಅಂಗನವಾಡಿಕೇಂದ್ರಗಳಿಗೆ ಎಲ್ಲ ರೀತಿಯ ಗುಣಾತ್ಮಕ ಮೂಲ ಸೌಲಭ್ಯಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.10ರಿಂದ ಅನಿರ್ದಿಷ್ಟಾವಧಿ ಹೋರಾಟವನ್ನು ನಡೆಸುತ್ತಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಂದ ಅಂಗನವಾಡಿ ನೌಕರರು ಬೆಂಗಳೂರಿಗೆ ಜಾಥಾದ ಮೂಲಕ ಪಾದಾಯಾತ್ರೆ ಹಮ್ಮಿಕೊಂಡಿದ್ದೇವೆ’ ಎಂದು ಜಿಲ್ಲಾ ಸಮಿತಿ ಅಧ್ಯಕ್ಷೆ ಕೆ.ಸುಜಾತ ಬಹಿರಂಗ ಸಭೆಯಲ್ಲಿ ತಿಳಿಸಿದರು.

‘ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡು, ಅಲ್ಲಿನ ಫ್ರೀಡಂ ಪಾರ್ಕ್‌ನಲ್ಲಿಅನಿರ್ದಿಷ್ಟ ಕಾಲ ಮುಷ್ಕರ ನಡೆಸಲಾಗುವುದು. ರಾಜ್ಯದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ನೌಕರರು ಭಾಗವಹಿಸಬೇಕು’ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT