ಚಾಮರಾಜನಗರ: ನಗರದ ಜೆಎಸ್ಎಸ್ ಅನಾಥಾಲಯ ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಖಂಡ ವೃಷಭೇಂದ್ರಪ್ಪ ಮಾತನಾಡಿ ‘ಸುತ್ತೂರು ಮಠದ ಹಿರಿಯ ಶ್ರೀಗಳಾದ ರಾಜೇಂದ್ರ ಸ್ವಾಮೀಜಿ ಶಿಕ್ಷಣ, ಅನ್ನದಾಸೋಹ ಸಹಿತ ಸಾಮಾಜಿಕ ಸೇವೆಗಳಿಗೆ ಬದುಕನ್ನು ಮೀಸಲಿಟ್ಟಿದ್ದರು. ಚಾಮರಾಜನಗರದಲ್ಲಿ ಆರಂಭಿಸಿರುವ ವಿದ್ಯಾರ್ಥಿ ನಿಲಯ 60 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದರು.

ಜಯರಾಮರಾಜೇಂದ್ರ ಶಿಕ್ಷಣ ಸಂಸ್ಥೆಯ ಎಎಒ ಮಹೇಂದ್ರ ಪಾಟೀಲ್ ಮಾತನಾಡಿ ಗ್ರಾಮೀಣ ಭಾಗದ ಮಕ್ಕಳಿಗೆ ನೆಲೆ ನೀಡಿರುವ ಸಂಸ್ಥೆಯು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ನೆರವಾಗಿದೆ ಎಂದರು.

ಜೆಎಸ್ಎಸ್ ಬಾಲಕರ ಪ್ರೌಢಶಾಲೆ ಮುಖ್ಯ ಶಿಕ್ಷಕ ಡಿ.ಶಿವಕುಮಾರ್ ಮಾತನಾಡಿ, ಎಸ್ಎಸ್ಎಲ್ಸಿ ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟವಾಗಿದ್ದು ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಕುವ ಮೂಲಕ ಭವಿಷ್ಯದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮುಖಂಡ ಮಂಜು ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಹಾಗೂ ಕನ್ನಡ–ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.