ಚಾಮರಾಜನಗರ: ನಟ ಕಮಲ ಹಾಸನ್ ಕನ್ನಡ ಭಾಷೆಯ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ಶುಕ್ರವಾರ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಪ್ರತಿಭಟನೆ ನಡೆಸಿತು. ನಗರದ ಭುವನೇಶ್ವರಿ ವೃತ್ತದಲ್ಲಿ ಕಮಲ್ ಹಾಸನ್ ಭಾವಚಿತ್ರ ಹರಿದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಕರವೇ ಜಿಲ್ಲಾಧ್ಯಕ್ಷ ಮಂಜೇಶ್ ಮಾತನಾಡಿ, ಸಾವಿರಾರು ವರ್ಷಗಳ ಭವ್ಯ ಇತಿಹಾಸವಿರುವ ಹೊಂದಿರುವ ಕನ್ನಡ ಭಾಷೆಯು ತಮಿಳು ಭಾಷೆಯಿಂದ ಹುಟ್ಟಿದ್ದು ಎಂದಿರುವ ಕಮಲ ಹಾಸನ್ ಕನ್ನಡಿಗರಿಗೆ, ಕನ್ನಡ ಭಾಷೆಗೆ ಅವಮಾನ ಮಾಡಿದ್ದಾರೆ.

ತಪ್ಪು ಮಾಡಿ ಕ್ಷಮೆಕೋರದ ಕಮಲ್ ಕನ್ನಡಿಗರ ಸ್ವಾಭಿಮಾನ ಕೆರಳಿಸಿದ್ದು, ರಾಜ್ಯ ಸರ್ಕಾರ, ಕರ್ನಾಟಕ ಚಲನಚಿತ್ರ ಮಂಡಳಿ ಅವರ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡಬಾರದು. ಕ್ಷಮೆ ಕೋರದಿದ್ದರೆ ಕಮಲ್ ಅಭಿನಯದ ಥಗ್ ಲೈಫ್ ಚಿತ್ರವನ್ನು ರಾಜ್ಯದಲ್ಲಿ ಬಹಿಷ್ಕರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಅಧ್ಯಕ್ಷ ಹಂಡ್ರಕಳ್ಳಿ ಸಂತೋಷ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಭಾಗ್ಯಲಕ್ಷ್ಮೀ, ತಾಲ್ಲೂಕು ಅಧ್ಯಕ್ಷೆ ಸುಮಾ, ಪದಾಧಿಕಾರಿಗಳಾದ ರಾಘವೇಂದ್ರ, ರಮೇಶ್ ನಾಯಕ, ಮಹೇಶ್, ಕುಮಾರ್, ಸುಂದರ್, ಮಹಾದೇವಸ್ವಾಮಿ, ರೂಪೇಶ್, ರಾಜೇಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.