ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ| ಕಣ್ಣೇಗಾಲ: ಟೋಲ್‌ ಸಂಗ್ರಹ ಆರಂಭ

Last Updated 12 ಡಿಸೆಂಬರ್ 2019, 9:39 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ 766ರಲ್ಲಿ ತಾಲ್ಲೂಕಿನ ಕಣ್ಣೇಗಾಲ ಗ್ರಾಮದ ಬಳಿ ನಿರ್ಮಿಸಲಾಗಿರುವ ಟೋಲ್ ಪ್ಲಾಜಾದಲ್ಲಿ ಬುಧವಾರದಿಂದ ಟೋಲ್ ಸಂಗ್ರಹ ಆರಂಭವಾಗಿದೆ.

ಬೆಳಿಗ್ಗೆ 10ರಿಂದವಾಹನ ಸಾಮರ್ಥ್ಯಕ್ಕೆ ಅನುಗುಣವಾಗಿ ನಿಗದಿತ ಶುಲ್ಕವನ್ನು ಸಿಬ್ಬಂದಿ ಪಡೆಯುತ್ತಿದ್ದಾರೆ.

ಸ್ಥಳೀಯರ ಆಕ್ರೋಶ: ಈ ಮಧ್ಯೆ, ಸ್ಥಳೀಯ ವಾಹನ ಸವಾರರಿಂದ ಟೋಲ್‌ ಸಂಗ್ರಹಿಸುತ್ತಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಅಲ್ಲಿನ ಸಿಬ್ಬಂದಿ ಜೊತೆ ವಾಗ್ವಾದವನ್ನೂ ನಡೆಸಿದರು. ಹೆಚ್ಚು ಗಲಾಟೆ ಮಾಡಿದವರಿಗೆ ಶುಲ್ಕದಿಂದ ವಿನಾಯಿತಿಯನ್ನೂ ನೀಡಿದ್ದಾರೆ.

ಸ್ಥಳೀಯ ವಾಹನಗಳಿಗೆ ಸಂಚರಿಸಲು ಸರ್ವಿಸ್‌ ರಸ್ತೆ ನಿರ್ಮಿಸಬೇಕು ಎಂದು ಸುತ್ತಮುತ್ತಲಿನ ರೈತರು, ಗ್ರಾಮಸ್ಥರು ಆಗ್ರಹಿಸಿದ್ದು, ಶುಲ್ಕ ವಿಧಿಸುವುದರ ವಿರುದ್ಧ ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು ಹಾಗೂ ಪ್ರಗತಿಪರರು ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT