ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಟ್ಟೆ ಎಸೆತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ: ಧ್ರುವನಾರಾಯಣ ಒತ್ತಾಯ

Last Updated 19 ಆಗಸ್ಟ್ 2022, 7:57 IST
ಅಕ್ಷರ ಗಾತ್ರ

ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊಡಗು ಜಿಲ್ಲಾ ಪ್ರವಾಸದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣಒತ್ತಾಯಿಸಿದರು.

'ಘಟನೆ‌ ನಡೆದಿರುವ ಹಿಂದೆ ರಾಜ್ಯ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಗುಪ್ತಚರ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ಬಿಜೆಪಿ ಕಾರ್ಯಕರ್ತರೇ‌ ಈ‌ ಕೃತ್ಯ ಮಾಡಿದ್ದು, ಇದರ‌ ನೈತಿಕ ಹೊಣೆ‌ ಹೊತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು. ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು' ಎಂದು ‌ಶುಕ್ರವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಶಾಸಕ ಯತೀಂದ್ರ ಸಿದ್ಧರಾಮಯ್ಯ ಮಾತನಾಡಿ, 'ಇದು ಹೇಡಿಗಳು ನಡೆಸಿದ ಕೃತ್ಯ. ದಾಳಿ ನಡೆಸಿದವರಿಗೆ ಸೈದ್ಧಾಂತಿಕವಾಗಿ ಗಟ್ಟಿತನ ಇಲ್ಲ. ಬಿಜೆಪಿಗರು ಹಿಂಸಾಚಾರದ ಮೂಲಕ ಗಲಾಟೆಗೆ ಇಳಿದಿದ್ದಾರೆ. ಯಾರಲ್ಲಿ ಸೈದ್ದಾಂತಿಕವಾಗಿ ಗಟ್ಟಿತನ ಇಲ್ಲವೋ ಅಲ್ಲಿ ಹಿಂಸಾಚಾರವಾಗುತ್ತದೆ. ಬಿಜೆಪಿಗರು ಪಕ್ಷದವರಿಂದ ಹಿಂಸಾಚಾರ ಮಾಡಿಸುತ್ತಾರೆ. ಒಬ್ಬ ವಿರೋಧ ಪಕ್ಷದ ನಾಯಕನಿಗೆ ರಕ್ಷಣೆ ಇಲ್ಲದಿದ್ದರೆ ಸಾಮಾನ್ಯ ಜನರಿಗೆ ಹೇಗೆ ರಕ್ಷಣೆ ಸಿಗಲು ಸಾಧ್ಯ?' ಎಂದು ವಾಗ್ದಾಳಿ ನಡೆಸಿದರು.

ದಾಳಿಗೆ ಹೆದರಲ್ಲ: 'ಮೊಟ್ಟೆ ‌ದಾಳಿ ಘಟನೆಯಿಂದ ಸಿದ್ದರಾಮಯ್ಯ ಹೆದರೋದಿಲ್ಲ. ಹೋರಾಟದ ಹಿನ್ನೆಲೆಯಿಂದ ಬಂದವರು, ಇಂತಹ ಘಟನೆಗೆ ಹೆದರುವ ಪ್ರಶ್ನೆಯೇ ಇಲ್ಲ. ಸರ್ಕಾರದ ವೈಫಲ್ಯ ಮಾರೆಮಾಚಲು ಇಂತಹ ಕೆಲಸಕ್ಕೆ ಇಳಿದಿದ್ದಾರೆ' ಎಂದು ಕಿಡಿಕಾರಿದರು.

ಶಾಸಕ ಅನಿಲ್ ಚಿಕ್ಕಮಾದು, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ನಗರ ಘಟಕದ‌ ಅಧ್ಯಕ್ಷ‌ ಆರ್.ಮೂರ್ತಿ ಇದ್ದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT