ಇಲ್ಲಿನ ಬುಡಕಟ್ಟು ಜನರಿಗೂ ಲಾಭ
ಅರಣ್ಯ ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ ಪರಿಶಿಷ್ಟ ಪಂಗಡದ ಬುಡಕಟ್ಟುಗಳ ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು ₹ 200 ಕೋಟಿ ಅನುದಾನ ನೀಡಲಾಗುವುದು. ಈ ಬುಡಕಟ್ಟು ಜನಾಂಗದವರಿಗೆ ರಾಜ್ಯ ಸಿವಿಲ್ ಸೇವೆಗಳಲ್ಲಿ ಪ್ರಾತಿನಿಧ್ಯ ನೀಡುವ ಸಲುವಾಗಿ ವಿಶೇಷ ನೇರ ನೇಮಕಾತಿಯನ್ನು ಕೈಗೊಳ್ಳಲಾಗುವುದು ಎಂದು ಘೋಷಿಸಲಾಗಿದೆ. ಇದರಲ್ಲಿ ಜಿಲ್ಲೆಯಲ್ಲಿರುವ ವಿವಿಧ ಬುಡಕಟ್ಟು ಜನರಲ್ಲಿ ಅರ್ಹರಿಗೆ ಲಾಭವಾಗಲಿದೆ. ಬುಡಕಟ್ಟು ಜನಾಂಗದ ಶೈಕ್ಷಣಿಕ ಉದ್ದೇಶಕ್ಕಾಗಿ ಸ್ಥಾಪಿಸಲಾಗಿರುವ 78 ಬುಡಕಟ್ಟು ವಸತಿ ಶಾಲೆಗಳಲ್ಲಿ 2025-26ನೇ ಸಾಲಿನಿಂದ 7ನೇ ತರಗತಿಯನ್ನು ಪ್ರಾರಂಭಿಸಲಾಗುವುದು. ಚಾಮರಾಜನಗರ ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿನ ಐದು ವಸತಿ ಶಾಲೆಗಳನ್ನು 12ನೇ ತರಗತಿಯವರೆಗೆ ಮೇಲ್ದರ್ಜೆಗೇರಿಸಲಾಗುವುದು ಎಂದು ತಿಳಿಸಲಾಗಿದೆ. ಇದರಲ್ಲಿ ಚಾಮರಾಜನಗಕ್ಕೆ ಸಿಗುವ ಪಾಲೆಷ್ಟು ಎನ್ನುವ ಸ್ಪಷ್ಟತೆ ಬಜೆಟ್‌ನಲ್ಲಿಲ್ಲ.