ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಈಚೆಗೆ ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಚಾಮರಾಜನಗರ ಜಿಲ್ಲೆಯನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು ಭಾನುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಲಿ ಡಬ್ಬ ಹಿಡಿದು ರಾಜ್ಯ ಬಜೆಟ್ನಲ್ಲಿ ಜಿಲ್ಲೆಗೆ ಸಿಕ್ಕಿದ್ದು ಖಾಲಿ ಡಬ್ಬ ಎಂದು ಅಣಕಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರಾಜ್ಯ ಬಜೆಟ್ನಲ್ಲಿ ಚಾಮರಾಜನಗರ ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಘೋಷಣೆ ಮಾಡಿಲ್ಲ. ಜಿಲ್ಲೆಗೆ ವಿಶೇಷ ಅನುದಾನ ನೀಡಿಲ್ಲ ಎಂದರು.

ಚಾಮರಾಜನಗರ ಜಿಲ್ಲೆಯನ್ನು ಸದಾ ಸ್ಮರಿಸುವ ಮುಖ್ಯಮಂತ್ರಿ ಬಜೆಟ್ನಲ್ಲಿ ಮಾತ್ರ ಜಿಲ್ಲೆಗೆ ಯಾವುದೇ ಕೊಡುಗೆ ನೀಡದೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ಮೇಕೆದಾಟು ಯೋಜನೆ ಜಾರಿಗೆ ಪಾದಯಾತ್ರೆ ಮಾಡಿದ ಕಾಂಗ್ರೆಸ್ ನಾಯಕರು ಬಜೆಟ್ನಲ್ಲಿ ಮಾತ್ರ ಯೋಜನೆಯ ಪ್ರಸ್ತಾಪ ಮಾಡಿಲ್ಲ. ನೀರಿನ ಹೆಸರಿನಲ್ಲಿ ರಾಜಕೀಯ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಾಡಿಗೆ ದ್ರೋಹ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಶಾ.ಮುರಳಿ, ಪಣ್ಯದಹುಂಡಿ ರಾಜು, ನಿಜಧ್ವನಿ ಗೋವಿಂದ್, ಮುತ್ತು, ಮುತ್ತಿಗೆ ಗೋವಿಂದರಾಜ, ರಾಚಪ್ಪ, ತಲಕಾಡು ಮಹದೇವು, ಅಮಚವಾಡಿ ರಾಜು, ಆಟೋ ಲಿಂಗರಾಜು, ಬಸವರಾಜು, ತಾಂಡವಮೂರ್ತಿ, ಜಗದೀಶ್, ಚಂದ್ರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.