ಸೋಮವಾರ, ಜೂನ್ 21, 2021
27 °C

ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್‌ಗೆ ಕೋವಿಡ್ ಸೋಂಕು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

v srinivas prasad

ಚಾಮರಾಜನಗರ: ಸಂಸದ ವಿ. ಶ್ರೀನಿವಾಸ್ ಪ್ರಸಾದ್‌ಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ.

ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಸಂಸದರು, ‘ನನ್ನ ಕೊರೊನಾ ಪರೀಕ್ಷೆ ವರದಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಗಳನ್ನು ಪಾಲಿಸುತ್ತಿದ್ದೇನೆ. ಆತಂಕಕ್ಕೆ ಕಾರಣವಿಲ್ಲ. ಕಳೆದ ಒಂದು ವಾರದ ಅವಧಿಯಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಾಗಿ ಮತ್ತು ಹೋಮ್ ಕ್ವಾರಂಟೈನ್‌ಗೆ ಒಳಪಡಬೇಕಾಗಿ ವಿನಂತಿಸುತ್ತೇನೆ’ ಎಂದು ಉಲ್ಲೇಖಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು