ಶುಕ್ರವಾರ, ಮಾರ್ಚ್ 5, 2021
30 °C

ಕೊರೋನಾ ಲಸಿಕೆ ವಿತರಣೆ: ಕರ್ನಾಟಕ ಸೇನಾಪಡೆಯಿಂದ ಸಂಭ್ರಮಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿ, ಈಡುಗಾಯಿ ಒಡೆದು ಜಿಲ್ಲೆಯಲ್ಲಿ ಕೋವಿಡ್‌ ಲಸಿಕೆ ವಿತರಣೆ ಆರಂಭವಾಗಿರುವುದನ್ನು ಸಂಭ್ರಮಿಸಿದರು. 

ಇದೇ ಸಂದರ್ಭದಲ್ಲಿ ಕೊರೊನಾ ಸೇನಾನಿಗಳು ಹಾಗೂ ಸಾರ್ವಜನಿಕರಿಗೆ ಸಿಹಿಯನ್ನು ಹಂಚಿದರು. ಕೋವಿಡ್‌ಗೆ ಲಸಿಕೆ ಕಂಡು ಹಿಡಿದ ವಿಜ್ಞಾನಿಗಳು, ಕೇಂದ್ರ ಸರ್ಕಾರ ಹಾಗೂ ಕೊರೊನಾ ವಾರಿಯರ್ಸ್‌ಗಳ ಪರವಾಗಿ ಜಯಘೋಷ ಮಾಡಿದರು. 

ಲಸಿಕೆ ಪ‍ಡೆದ ಆರೋಗ್ಯ ಕಾರ್ಯಕರ್ತರಿಗೆ ಏನೂ ತೊಂದರೆಯಾಗದಿರಲಿ, ಲಸಿಕೆ ವಿತರಣೆ ಅಭಿಯಾನ ಯಶಸ್ವಿಯಾಗಲಿ ಎಂದು ಚಾಮರಾಜೇಶ್ವರಸ್ವಾಮಿಯನ್ನು ಪ್ರಾರ್ಥಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು, ‘ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ದಿನ ಇದಾಗಿದ್ದು, ಜಗತ್ತನ್ನೇ ತಲ್ಲಣಗೊಳಿಸಿದ ಕೋವಿಡ್‌ ಹೆಮ್ಮಾರಿಯ ನಿಯಂತ್ರಣಕ್ಕೆ ಔಷಧ ಕಂಡು ಹಿಡಿದು ಕೊರೊನಾ ಸೇನಾನಿಗಳಿಗೆ ಲಸಿಕೆ ವಿತರಣೆ ಮಾಡುತ್ತಿರುವುದು ತುಂಬಾ ಸಂತಸಪಡುವ ಸಂಗತಿ’ ಎಂದರು. 

ಶಾ.ಮುರಳಿ, ಚಾ.ವೆಂ.ರಾಜ್‌ಗೋಪಾಲ್, ಹ.ವಿ.ನಟರಾಜು, ನಿಜಧ್ವನಿಗೋವಿಂದರಾಜು, ವೀರಭದ್ರ, ನಂಜುಂಡ, ಶಿವಶಂಕರನಾಯಕ, ತಾಂಡವಮೂರ್ತಿ, ಲಿಂಗರಾಜು, ಎಂಡಿಆರ್ ಸ್ವಾಮಿ, ಶಂಕರ್, ಸಾಗರ್ ಇದ್ದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು