ಕೊಳ್ಳೇಗಾಲ: ಮನುಷ್ಯನಿಗೆ ಹಣ ಆಸ್ತಿ ಮುಖ್ಯವಲ್ಲ ಆರೋಗ್ಯವೇ ಮುಖ್ಯ ಎಂದು ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಜಯಲಕ್ಷ್ಮಿ ಹೇಳಿದರು.

ನಗರದ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ನಡೆದ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ಕ್ರೀಡಾ ವಿಭಾಗಗಳ ವತಿಯಿಂದ ಪ್ರಥಮ ಚಿಕಿತ್ಸಾ ವಿಧಾನಗಳು ಮತ್ತು ರಕ್ತದಾನದ ಮಹತ್ವ – ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಹೀಗಿದ್ದರೆ ಮಾತ್ರ ನೀವು ಜೀವನದಲ್ಲಿ ಯಶಸ್ಸು ಕಾಣಬಹುದು.ಸಣ್ಣಪುಟ್ಟ ಅಪಘಾತವಾದ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಬೈಕ್ ಹಾಗೂ ಕಾರಿನಲ್ಲಿ ಇಟ್ಟುಕೊಂಡು ಹೋಗಬೇಕು. ಮುಖ್ಯವಾಗಿ ಟ್ರಾಫಿಕ್ ಪಾಲನೆಯನ್ನು ಪ್ರತಿಯೊಬ್ಬರೂ ಮಾಡಬೇಕು. ಇದರ ಜೊತೆಗೆ ವಿದ್ಯಾರ್ಥಿಗಳು ರಕ್ತದಾನ ಮಾಡಿ ಜೀವಗಳನ್ನು ಉಳಿಸಿಕೊಳ್ಳಬೇಕು ರಕ್ತದಾನ ಮಹಾದಾನ ರಕ್ತದಾನ ಮಾಡಿದರೆ ಆರೋಗ್ಯ ಮತ್ತಷ್ಟು ಅಭಿವೃದ್ಧಿಯಾಗುತ್ತದೆ ಎಂದರು.

ಯುವ ರೆಡ್ ಕ್ರಾಸ್ ಸಮಿತಿಯ ಸದಸ್ಯರಾದ ಡಾ. ಕೃಪಾ ಶಂಕರ್, ಡಾ.ಆನಂದ್, ಭಾರತೀಯ ಯುವ ರೆಡ್ ಕ್ರಾಸ್ ಸಮಿತಿಯ ಸಂಚಾಲಕ ಹಾಗೂ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜಯಶಂಕರ್, ಕಾಲೇಜಿನ ಗ್ರಂಥಪಾಲಕ ಮಹದೇವಯ್ಯ, ಅರುಣ್ ಕುಮಾರ್, ಸಫೀನಾ ಬಾನು, ಮಧುಸೂದನ್, ಮಾನಸ ಪ್ರಿಯದರ್ಶಿನಿ ಸೋಮಶೇಖರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-37-657080266

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.