ಕೊಳ್ಳೇಗಾಲ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಕಡಿತಗೊಳಿಸಿರುವುದನ್ನು ಖಂಡಿಸಿ ತಾಲ್ಲೂಕು ನಾಯಕರ ಸಂಘ ಮತ್ತು ನಾಯಕ ಜನಾಂಗದ ಗಡಿಮನೆ, ಕಟ್ಟೆ ಮನೆ ಮತ್ತು ಕಸಬಾ ಮನೆಯ ಯಜಮಾನರು ಮತ್ತು ಕುಲಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ದೊಡ್ಡ ನಾಯಕರ ಬೀದಿಯಿಂದ ಹೊರಟ ಪ್ರತಿಭಟನೆ ಚಿಕ್ಕ ನಾಯಕರ ಬೀದಿ, ಡಾ. ಬಿ.ಆರ್.ಅಂಬೇಡ್ಕರ್ ರಸ್ತೆ ಮೂಲಕ ತಾಲ್ಲೂಕು ಕಚೇರಿ ತೆರಳಿ ಪ್ರತಿಭಟಿಸಿ, ಶಿರೆಸ್ತೇದಾರ್ ಕೃಪಕಾರ್ ಅವರಿಗೆ ಮನವಿ ಸಲ್ಲಿಸಿದರು.

ಮುಖಂಡ ಕೊಪ್ಪಳಿ ಮಹದೇವ ನಾಯಕ ಮಾತನಾಡಿ, ‘ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸುವಂತೆ ಹಲವು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ವಿವಿಧ ಆಯೋಗಗಳ ಶಿಫಾರಸಿನ ಮೇರೆಗೆ ರಾಜ್ಯ ಸರ್ಕಾರ 2022ರಲ್ಲಿ ಮೀಸಲಾತಿ ಪ್ರಮಾಣವನ್ನು ಎಸ್ಸಿಗೆ ಶೇ15ರಿಂದ ಶೇ17 ಹಾಗೂ ಎಸ್ಟಿಗೆ ಶೇ 3ರಿಂದ ಶೇ 7ಕ್ಕೆ ಹೆಚ್ಚಿಸುವ ಕಾಯ್ದೆ ಜಾರಿಗೊಳಿಸಿತ್ತು. ಆದರೆ ಈ ಕಾಯ್ದೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ಜಾರಿಯಾಗಿರುವುದು ಸಾಮಾಜಿಕ ನ್ಯಾಯಕ್ಕೆ ಹಿನ್ನಡೆಯಾಗಿದೆ ಎಂದು ಆರೋಪಿಸಿದರು.

ಕಾಯ್ದೆಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವ ಮೂಲಕ ಕಾನೂನಿಗೆ ಸಂವಿಧಾನಾತ್ಮಕ ರಕ್ಷಣೆ ನೀಡಬೇಕು. ಈ ಕುರಿತು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣಪತ್ರ ಪಡೆದು ಸೌಲಭ್ಯ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಅಂತಹ ಪ್ರಮಾಣಪತ್ರಗಳನ್ನು ನೀಡುವ ಅಧಿಕಾರಿಗಳ ಮೇಲೂ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ತಾಲ್ಲೂಕು ನಾಯಕರ ಸಂಘದ ಅಧ್ಯಕ್ಷ ಜಗದೀಶ್ ನಾಯಕ, ಉಪಾಧ್ಯಕ್ಷ ಮಹದೇವ ನಾಯಕ, ನಿರ್ದೇಶಕ ಕುನ್ನನಾಯಕ, ನಿಂಗನಾಯಕ, ನಟರಾಜು, ಪಾಳ್ಯ ಕೃಷ್ಣ, ಪಾಳ್ಯ ಜಯಸುಂದರ, ಮುಖಂಡ ಪ್ರಸಾದ್, ಮೂರ್ತಿ, ವೆಂಕಟಾಚಲ, ಗವಿರಾಯ ನಾಯಕ, ದೊಡ್ಡ ಸೀಗನಾಯಕ, ಶಿವಪ್ರಸಾದ್ ನಾಯಕ, ದುಂಡು ಮಾದ ನಾಯಕ, ವಿಶ್ವಮೂರ್ತಿ ನಾಯಕ, ಸೀಗನಾಯಕ ಕಸಬಾ ಕೊಪ್ಪಾಳಿ ಮಹದೇವ ನಾಯಕ, ಶಂಕರ್ ಸೇರಿದಂತೆ ಅನೇಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-37-337448293

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.