ಕೊಳ್ಳೆಗಾಲ (ಚಾಮರಾಜನಗರ): ಕೊಳ್ಳೇಗಾಲ ಜೆಡಿಎಸ್ ಬಂಡಾಯ ಅಭ್ಯರ್ಥಿ ಓಲೆ ಮಹದೇವ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದು ಸೋಮವಾರ ನಾಮಪತ್ರವನ್ನು ವಾಪಸ್ ಪಡೆಯಲು ತೀರ್ಮಾನ ಕೈಗೊಂಡಿದ್ದಾರೆ.

ಮೂರು ತಿಂಗಳ ಹಿಂದೆ ಅಷ್ಟೆ ಜೆಡಿಎಸ್ ಸೇರಿದ ಓಲೆ ಮಹದೇವ ಭಾನುವಾರ ಮಾಜಿ ಶಾಸಕರಾದ ಜಯಣ್ಣ, ಜಿ.ಎನ್. ನಂಜುಂಡ ಸ್ವಾಮಿ ಹಾಗೂ ಅಭ್ಯರ್ಥಿ ಕೃಷ್ಣಮೂರ್ತಿ ಅವರ ಸಮುಖದಲ್ಲಿ ಜೆಡಿಎಸ್ ತೊರೆದು ಕಾಂಗ್ರೇಸ್ ಸೇರುವುದಾಗಿ ಇಚ್ಛೆ ವ್ಯಕ್ತಪಡಿಸಿದ್ದರು.

ಅಲ್ಲದೇ ತಾವು ಚುನಾವಣೆ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರವನ್ನು ವಾಪಸ್ ಪಡೆದು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ಒಪ್ಪಿಕೊಂಡಿದ್ದಾರೆ.

ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಮುಖ್ಯ ಕಾರಣ ನಮ್ಮ ಮಾವನವರಾದ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿರವರು ಮತ್ತು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಮಲ್ಲಿಕಾರ್ಜುನ ಖರ್ಗೆಯವರ ಪ್ರೇರಣೆಯಿಂದ ನಾನು ಕಾಂಗ್ರೇಸ್ ಸೇರಲು ಇಚ್ಛೀಸಿದ್ದೇನೆ. ಎ.ಆರ್.ಕೃಷ್ಣಮೂರ್ತಿ ರವರನ್ನು ಗೆಲ್ಲಿಸಲು ಕಾವ ವಾಚ , ಮನಸ್ಸ ಶ್ರಮಿಸುವುದಾಗಿ ಜೆಡಿಎಸ್ ಬಂಡಾಯ ಅಭ್ಯರ್ಥಿ ಓಲೆ ಮಹದೇವ ತಿಳಿಸಿದರು.

ಇದೇ ಸಂದರ್ಭದಲ್ಲಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರ ಕಟ್ಟಾ ಬೆಂಬಲಿಗ ಮಾಂಬಳ್ಳಿ ನಂಜುಂಡಸ್ವಾಮಿ, ಮಹೇಶ್ ರವರ ಆಪ್ತ ಲೋಕೇಶ್ ರವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಜಯಣ್ಣ, ಜಿ.ಎನ್.ನಂಜುಂಡಸ್ವಾಮಿ ಹಾಗೂ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರು, ನಗರಸಭೆ ಸದಸ್ಯ ಶಾಂತರಾಜು, ಮನೋಹರ್ ಮುಖಂಡ ರಮೇಶ್. ರಾಜೇಂದ್ರ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.