ಕೊಳ್ಳೇಗಾಲ: ಮದ್ಯಪಾನ ಮಾಡಲು ಹಣ ನೀಡಲು ನಿರಾಕರಿಸಿದ ಪತ್ನಿಯನ್ನು ಕೊಲೆ ಮಾಡಿದ್ದ ಅಪರಾಧಿ ಪತಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಟಿ.ಸಿ. ಶ್ರೀಕಾಂತ್ ಮಂಗಳವಾರ ಜೀವಾವಧಿ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದ್ದಾರೆ.
ಹನೂರು ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ನಿವಾಸಿ ಅಮಲ್ ರಾಜ್ ಶಿಕ್ಷೆಗೆ ಒಳಗಾದ ಅಪರಾಧಿ.

2024ರ ಡಿಸೆಂಬರ್ 23 ರಂದು ಸಂಜೆ 5 ಗಂಟೆ ಸುಮಾರಿಗೆ ಆರೋಪಿ ಅಮಲ್ ರಾಜ್ ಹೆಂಡತಿ ಶೋಭಾ ಬಳಿ ಮದ್ಯಪಾನ ಮಾಡಲು ಹಣ ನೀಡುವಂತೆ ಪೀಡಿಸಿದ್ದ. ಆಕೆ ಹಣ ನೀಡದ ಕಾರಣಕ್ಕೆ ಅಮಲ್, ಶೋಭಾ ಅವರನ್ನು ಮನೆ ಒಳಗೆ ಕರೆದುಕೊಂಡು ಹೋಗಿ ಚಿತ್ರಹಿಂಸೆ ನೀಡಿ, ಹಲ್ಲೆ ನಡೆಸಿದ್ದ. ನಂತರ ಶೋಭಾ ಪೊಲೀಸ್ ಠಾಣೆಗೆ ದೂರು ನೀಡಲುತ್ರಿ ರಾತ್ರಿ 9ರ ಸಮಯದಲ್ಲಿ ಗ್ರಾಮದ ಶಿವು ಅವರ ಮೆಣಸಿನ ಕಾಯಿ ಬೆಳೆ ಇದ್ದ ಜಮೀನಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಮಲ್ ರಾಜ್ ಹಿಂಬದಿಯಿಂದ ಬಂದು ಶೋಭಾ ಅವರಿಗೆ ದೊಣ್ಣೆಯಿಂದ ಹೊಡೆದು ಎಡಗೈಗೆ ಮುರಿದು ಹಾಕಿದ್ದ. ನಂತರ ಆಕೆ ಕೆಳಗೆ ಬಿದ್ದಾಗ ಮತ್ತೆ ದೊಣ್ಣೆಯಿಂದ ಹಲ್ಲೆ ನಡೆಸಿ, ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದ. ಸಾಕ್ಷಿ ನಾಶ ಮಾಡುವ ಸಲುವಾಗಿ ಜಮೀನಿನ ಮುಳ್ಳಿನ ಪೊದೆಗೆ ಶೋಭಾ ಅವರ ಮೃತ ದೇಹವನ್ನು ಎಸೆದಿದ್ದ.

ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಗಿರೀಶ್ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.