ಬುಧವಾರ, ಸೆಪ್ಟೆಂಬರ್ 29, 2021
19 °C

ಕೊಳ್ಳೇಗಾಲ: ಶಾಸಕ ಎನ್.ಮಹೇಶ್‌ಗೆ ಪತ್ನಿ ವಿಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಳ್ಳೇಗಾಲ: ಸ್ಥಳೀಯ ಶಾಸಕ ಎನ್.ಮಹೇಶ್ ಅವರ ಪತ್ನಿ ವಿಜಯಾ (64) ಅವರು ಭಾನುವಾರ ರಾತ್ರಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾದರು.

ಅವರು ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಭಾನುವಾರ ರಾತ್ರಿ ಮನೆಯಲ್ಲಿ ಉಸಿರಾಟದ ಸಮಸ್ಯೆ ತೀವ್ರವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 11.30 ಸುಮಾರಿಗೆ ಕೊನೆಯುಸಿರೆಳೆದರು.

ಮಂಡ್ಯ ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ಆಗಿದ್ದ ವಿಜಯಾ ಅವರು ಮೂರು ವರ್ಷಗಳ ಹಿಂದೆ ನಿವೃತ್ತರಾಗಿದ್ದರು.

ಅವರಿಗೆ ಪತಿ ಎನ್.ಮಹೇಶ್ ಹಾಗೂ ಪುತ್ರ ಇದ್ದಾರೆ. ಅಂತ್ಯಸಂಸ್ಕಾರ ಬೆಂಗಳೂರು‌ ಸಮೀಪದ ಕನಕಪುರದಲ್ಲಿರುವ ಕಾನ್ಸಿ ಫೌಂಡೇಷನ್‌ನಲ್ಲಿ ಇಂದು ಸಂಜೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು