ಕೊಳ್ಳೇಗಾಲ: ಶಾಸಕ ಎ.ಆರ್. ಕೃಷ್ಣಮೂರ್ತಿ ಅವರ ಸಹಕಾರದಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅದ್ದೂರಿ ಹಾಗೂ ಯಶಸ್ವಿಯಾಗಿ ನಡೆದಿದೆ ಎಂದು ನಗರಸಭೆ ಅಧ್ಯಕ್ಷೆ ರೇಖಾ ಹೇಳಿದರು.

ಶಾಸಕರು ಕೊಟ್ಟ ಮಾತಿನಂತೆ ನಡೆದುಕೊಂಡು, ಕಾರ್ಯಕ್ರಮದ ಸಿದ್ಧತೆಗೆ ಒಂದು ವಾರ ಶ್ರಮಿಸಿದ್ದಾರೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯನ್ನು ತಡವಾಗಿ ನಡೆಸಿದ್ದಕ್ಕೆ ಕೆಲವರು ಶಾಸಕರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿದರು. ಆದರೆ ಶಾಸಕರು ಇಂತಹ ಹೇಳಿಕೆಗೆ ತಲೆಕೆಡಿಸಿಕೊಳ್ಳದೆ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ನಡೆಸಿಕೊಟ್ಟಿದ್ದಾರೆ. ಎಲ್ಲ ಇಲಾಖೆಗಳು ಉತ್ತಮ ಸಹಕಾರ ನೀಡಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ನಗರಸಭೆ ಸದಸ್ಯ ಮಂಜುನಾಥ್, ಧರಣೇಶ್, ನಾಗಣ್ಣ, ನರಸಿಂಹ, ಅನ್ಸರ್ ಬೇಗ್, ಸ್ವಾಮಿ ನಂಜಪ್ಪ, ಶಿವಮಲ್ಲು, ಪ್ರಕಾಶ್ ರಾಮಕೃಷ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.