ಕೊಳ್ಳೇಗಾಲ: ಇಲ್ಲಿನ ಭೀಮನಗರ ಬಡಾವಣೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಪದಾಧಿಕಾರಿಗಳು ಒಕ್ಕೊರಲಿನ ತೀರ್ಮಾನ ಕೈಗೊಂಡರು.

ನಗರದ ವಸತಿಗೃಹದಲ್ಲಿ ಮಂಗಳವಾರ ಈ ಸಂಬಂಧ ಆಯೋಜಿಸಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಭೀಮನಗರದ ಮುಖಂಡ ಎಂ.ವರದರಾಜು ಮಾತನಾಡಿ, ಕಳೆದ ವರ್ಷದಂತೆ ಈ ಬಾರಿಯೂ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಭೀಮನಗರದವರೆಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಅಂಬೇಡ್ಕರ್ ಜಯಂತಿ ಹಿನ್ನೆಲೆ ಏ.12ರಂದು ಭೀಮನಗರದಲ್ಲಿ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. 13ರಂದು ಬೆಂಗಳೂರು ರಸ್ತೆಯ ಬಸವೇಶ್ವರ ರೈಸ್ ಮಿಲ್ ಬಳಿಯ ಮೈದಾನದಲ್ಲಿ ಭಗವಾನ್ ಬುದ್ಧ ಗೀತಾ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮ. 14ರಂದು ರಂಗೋಲಿ ಸ್ಪರ್ಧೆ, ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಹಾಗೂ ಸರ್ಕಾರಿ ಕಾರ್ಯಕ್ರಮ ಇರಲಿದೆ ಎಂದು ತಿಳಿಸಿದರು.

ನಂತರ ಸಂಜೆ ಭೀಮನಗರದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಮುಖ್ಯಮಂತ್ರಿ ಪದಕ ಪುರಸ್ಕೃತ ಪೊಲೀಸ್ ಅಧಿಕಾರಿಗಳಾದ ಎಸಿಪಿ ಎಚ್.ಕೆ.ಮಹಾನಂದ, ಎಎಸ್ಪಿ ಎಸ್.ಶಿವಕುಮಾರ್, ವಿವಿಧ ಗಣ್ಯರಿಗೆ ಗೌರವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಾಲ್ಲೂಕಿನ ಎಲ್ಲಾ ಗ್ರಾಮದ ಅಂಬೇಡ್ಕರ್ ಸಂಘದ ಪದಾಧಿಕಾರಿಗಳು ಮತ್ತು ಯಜಮಾನರನ್ನು ಆಹ್ವಾನಿಸಲು 3 ಪ್ರತ್ಯೇಕ ತಂಡ ನೇಮಿಸಲಾಯಿತು.

ಸಭೆಯಲ್ಲಿ ಭೀಮನಗರದ ಮುಖಂಡ ಚಿಕ್ಕಮಾಳಿಗೆ, ಕೆ.ಕೆ.ಮೂರ್ತಿ, ಸಿ.ಸಾವಕಯ್ಯ, ನಿಂಗರಾಜು, ನಟರಾಜು, ಪುಟ್ಟಸ್ವಾಮಿ, ಸನತ್ ಕುಮಾರ್, ರಾಜಶೇಖರ್ ಮೂರ್ತಿ, ಸಿದ್ದಾರ್ಥ, ಕೃಷ್ಣರಾಜ್, ಲಿಂಗರಾಜು, ಮಹಾದೇವಸ್ವಾಮಿ, ಎಸ್.ರಮೇಶ್, ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷ ಆನಂದಮೂರ್ತಿ, ಕಾರ್ಯದರ್ಶಿ ಪಾಪಣ್ಣ, ಉಪಾಧ್ಯಕ್ಷ ಕಿರಣ್, ಸಹ ಕಾರ್ಯದರ್ಶಿ ಶಶಿಧರ್, ದಿಲೀಪ್, ಸಿದ್ದಪ್ಪಾಜಿ, ಬೆಂಜಮಿನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-37-1754870589

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.