ಕೊಳ್ಳೇಗಾಲ: ‘ಕಾಂಗ್ರೆಸ್ ಪಕ್ಷದ ವರಿಷ್ಠ, ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಕ್ರೈಸ್ತ ಸಮುದಾಯ ಕ್ಷೇಮಾಭಿವೃದ್ಧಿ ಒಕ್ಕೂಟದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಸೆಲ್ವರಾಜು ಒತ್ತಾಯಿಸಿದರು.

‘ಧೀಮಂತ ನಾಯಕ, ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ಪುತ್ರ ಎ.ಆರ್.ಕೃಷ್ಣಮೂರ್ತಿ ಕ್ಷೇತ್ರದ ಶಾಸಕರಾದ ಮೇಲೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡುವ ಮೂಲಕ ಸುಮಾರು ₹500 ಕೋಟಿ ಅನುದಾನ ತಂದಿದ್ದಾರೆ. ಸರ್ವ ಧರ್ಮ, ಸರ್ವ ಸಮುದಾಯವನ್ನು ಅಭಿವೃದ್ಧಿಗೊಳಿಸಿದ್ದಾರೆ’ ಎಂದು ಶುಕ್ರ ವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಮೂರು ಬಾರಿ ಶಾಸಕರಾಗಿ ರಾಜಕೀಯದಲ್ಲಿ ಚಾಣಾಕ್ಷರಾಗಿದ್ದಾರೆ, ಹಾಗಾಗಿ ಇವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆ ಹಿಂದುಳಿದ ಪಟ್ಟಿಯಿಂದ ಹೊರಬಂದು ಮತ್ತಷ್ಟು ಅಭಿವೃದ್ಧಿಯಾಗುತ್ತದೆ’ ಎಂದರು.

ಬೇತೆಲ್ ಲೂಥರನ್ ಚರ್ಚ್ನ ಫಾಸ್ಟರ್ ಜೋಶುವಾ ಪ್ರಸನ್ನಕುಮಾರ್ ಮಾತನಾಡಿ, ‘ಎ.ಆರ್.ಕೃಷ್ಣಮೂರ್ತಿ ಅವರು ಮೂರು ವರ್ಷಗಳಿಂದ ಎಲ್ಲಾ ಸಮುದಾಯವನ್ನು ಅಭಿವೃದ್ಧಿಪಡಿಸುವ ಜೊತೆಗೆ ಕ್ರೈಸ್ತ ಸಮುದಾಯದ ಏಳಿಗೆಗೆ ಶ್ರಮಿಸಿದ್ದಾರೆ’ ಎಂದು ಹೇಳಿದರು.

ಎಸ್.ಡಿ.ಎ ಚರ್ಚ್ ಫಾಸ್ಟರ್ ಹೆಚ್.ಕೆ.ಅಂತೋಣಿ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಫಾಸ್ಟರ್ ಜೋಯಲ್ ನಾರಾಯಣ್, ಜಾಕೊಬ್, ಜರೂ, ಕರುಣಕಾರ್, ಕ್ಷೇಮಾಭಿವೃದ್ಧಿ ಒಕ್ಕೂಟದ ಗೌರವಧ್ಯಕ್ಷ ಎ.ವಿನ್ಸೆಂಟ್, ಉಪಾಧ್ಯಕ್ಷ ಟಿ.ಜಾನ್ ಪೀಟರ್ ಹಾಗೂ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-37-1402120989

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.