ಕೊಳ್ಳೇಗಾಲ: ಜಗಜ್ಯೋತಿ ಬಸವೇಶ್ವರರ 893ನೇ ಜಯಂತಿ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಉತ್ಸವಕ್ಕೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಭಾನುವಾರ ಚಾಲನೆ ನೀಡಿದರು.

ನಗರದ ಎಂ.ಜಿ.ಎಸ್.ವಿ.ಮೈದಾನದಲ್ಲಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊಳ್ಳೇಗಾಲದಲ್ಲಿ ಬಹಳ ವಿಜೃಂಭಣೆಯಿಂದ ಬಸವೇಶ್ವರರ ಜಯಂತಿ ಆಚರಣೆ ಮಾಡಲಾಗುತ್ತಿದೆ. ಬಸವಣ್ಣನವರು ಈ ನಾಡು ಕಂಡಂತಹ ಸಾಂಸ್ಕೃತಿಕ ನಾಯಕ. ಅನುಭವ ಮಂಟಪ ಮಾಡಿ ಎಲ್ಲಾ ಸಮುದಾಯದ ಮಹನೀಯರನ್ನು ಸೇರಿಸಿ ದೀಕ್ಷೆಯನ್ನು ಬೋಧಿಸಿ ಎಲ್ಲರೂ ಸಮಾನರು ಎಂಬ ನೀತಿಯನ್ನು ಹೇಳಿದರು. ಅದೇ ರೀತಿ ಬಸವಣ್ಣ ಹಾಗೂ ಮಹನೀಯರ ಮಾನವೀಯ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸರ್ವರ ಜೊತೆ ಸಮಾನ ಗೌರವದಿಂದ ಬಾಳಬೇಕು ಎಂದರು.

ಜಾತಿ, ಧರ್ಮ, ಮೇಲು– ಕೀಳು ಎಂಬ ಭಾವನೆ ಹೋಗಲಾಡಿಸಲು ಕ್ರಾಂತಿಕಾರಿ ಹೋರಾಟ ಪ್ರಾರಂಭಿಸಿದ್ದು ಬಸವಣ್ಣರವರು, ಅದೇ ರೀತಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದಲ್ಲಿ ಇರುವಂತಹ ಸಾಮಾಜಿಕ ಅಸಮಾನತೆಯ ಪಿಡುಗನ್ನು ತೊಲಗಿಸಲು ಹೋರಾಡಿದರು. ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಹಕ್ಕು ಮತ್ತು ಅಧಿಕಾರ ಕೊಟ್ಟಿದ್ದಾರೆ. ಬಸವಣ್ಣನವರ ತತ್ವ ಸಿದ್ಧಾಂತಗಳು ನಮ್ಮ ಜೀವನಕ್ಕೆ ದಾರಿದೀಪವಾಗಿವೆ. ಹಾಗಾಗಿ ಯುವ ಪೀಳಿಗೆ ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಪಾಲಿಸಿಕೊಂಡು ಜೀವನವನ್ನು ಉತ್ತಮ ರೀತಿಯಲ್ಲಿ ನಡೆಸಬೇಕು ಎಂದು ಸಲಹೆ ನೀಡಿದರು.

ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಪಟ್ಟಣದ ಯಾವುದಾದರೂ ಮುಖ್ಯ ವೃತ್ತಕ್ಕೆ ಬಸವೇಶ್ವರ ಸರ್ಕಲ್ ಎಂದು ನಾಮಕರಣ ಮಾಡುವಂತೆ ಬಸವ ಬಳಗ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.

ಮೆರವಣಿಗೂ ಮೊದಲು ಅಕ್ಕನ ಬಳಗ, ಕದಳಿ ವೇದಿಕೆ, ಸೇರಿದಂತೆ ಇತರೆ ಸಂಘದ ಮಹಿಳೆಯರು ಕಳಸ ಹಿಡಿದುಕೊಂಡು ಸುತ್ತೂರು ಶ್ರೀಗಳನ್ನು ಬರಮಾಡಿಕೊಂಡರು. ಎಂ.ಜಿ.ಎಸ್.ವಿ ಮೈದಾನದಿಂದ ಹೊರಟ ಮೆರವಣಿಗೆ ನಂದಿ ಕಂಬಗಳು, ಡೊಳ್ಳು ಕುಣಿತ, ವೀರಗಾಸೆ, ಮಹಿಳಾ ವೀರಗಾಸೆ, ಅಘೋರಿ ವೇಷಧಾರಿ, ಪೂಜಾ ಕುಣಿತ, ಕೋಲಾಟ, ಸ್ತಬ್ಧಚಿತ್ರಗಳ ಮೆರವಣಿಗೆ, ಹಳ್ಳಿಕಾರ್ ಹೋರಿ ಸೇರಿದಂತೆ ಇನ್ನಿತರತರ ಕಲಾತಂಡಗಳೊಂದಿಗೆ ಗುರುಕಾರ್ ವೃತ್ತ, ಡಾ.ರಾಜಕುಮಾರ್ ರಸ್ತೆ, ಮಸೀದಿ ವೃತ್ತ, ಡಾ.ಬಿ.ಆರ್. ಅಂಬೇಡ್ಕರ್ ರಸ್ತೆ ಮೂಲಕ ಸಾಗಿತು.

ಮೆರವಣಿಗೆಯಲ್ಲಿ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಮುಡಿಗುಂಡ ವಿರಕ್ತ ಮಠದ ಸ್ವಾಮೀಜಿ, ಹನೂರು ಶಾಸಕ ಎಂ.ಆರ್.ಮಂಜುನಾಥ್, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಕಾಡಾ ಅಭಿವೃದ್ದಿ ನಿಗಮ ಅಧ್ಯಕ್ಷ ಮರಿಸ್ವಾಮಿ, ಮಾಜಿ ಶಾಸಕ ಆರ್.ನರೇಂದ್ರ, ಎಸ್.ಬಾಲರಾಜು, ಜಿ.ಎನ್.ನಂಜುಂಡಸ್ವಾಮಿ, ಪರಿಮಳಾ ನಾಗಪ್ಪ, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಎಸ್.ದತ್ತೇಶ್ ಕುಮಾರ್, ಯುವ ಉದ್ಯಮಿ ನಿಶಾಂತ್, ಪ್ರೀತಮ್ ನಾಗಪ್ಪ, ಬೆಂಗಳೂರಿನ ಸಿಸಿಬಿ ವಿಭಾಗದ ಎಸಿಪಿ ಎಚ್.ಕೆ.ಮಹಾನಂದ, ಜೆಡಿಎಸ್ ಮುಖಂಡ ಬಿ.ಪುಟ್ಟಸ್ವಾಮಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಅಧ್ಯಕ್ಷ ಪುಟ್ಟಣ್ಣ, ಉಪಾಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿ ಮಹೇಶ್, ನಿರ್ದೇಶಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-37-2119800814

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.