ಕೊಳ್ಳೇಗಾಲ: ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರುಗಳಲ್ಲಿದ್ದ ಇಬ್ಬರು ಮಕ್ಕಳು ಸೇರಿ 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ತಾಲ್ಲೂಕಿನ ದಾಸನಪುರ ಗ್ರಾಮದ ಚಾಲಕ ಕಾಂತರಾಜು ಎನ್ನುವರು ತೀವ್ರ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಲ್ಲೂಕಿನ ಬನ್ನಿಸಾರಿಗೆ ಗ್ರಾಮದ ಸ್ವಾತಿ (11), ಖುಷಿ (11) ಮೂರ್ತಿ(48) ಅವರು ಗಾಯಗೊಂಡಿದ್ದು, ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ದಾಸನಪುರದ ಸೋಮಣ್ಣ (35) ಕೊಳ್ಳೇಗಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬನ್ನಿಸಾರಿಗೆ ಗ್ರಾಮದ ಹಬ್ಬಕ್ಕಾಗಿ ಮಕ್ಕಳು ರಜೆ ಹಾಕಿ ಶಾಲೆಯಿಂದ ಮನೆಗೆ ಬಂದಿದ್ದರು. ರಜೆ ಮುಗಿಸಿಕೊಂಡು ಮಕ್ಕಳನ್ನು ಹನೂರಿನ ಏಕಲವ್ಯ ಶಾಲೆಗೆ ವಾಪಸ್ ಕರೆದೊಯ್ಯುವಾಗ ಅಪಘಾತವಾಗಿದೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.