ಕೊಳ್ಳೇಗಾಲ: ನಗರಸಭೆ ದುರಾಡಳಿತ ನಡೆಸುತ್ತಿದೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ನಗರದ ಅಭಿವೃದ್ಧಿ ಮರೆತಿದ್ದಾರೆ ಎಂದು ಆರೋಪಿಸಿ ಶುಕ್ರವಾರ ಬಹುಜನ ಸಮಾಜ ಪಕ್ಷದ ವತಿಯಿಂದ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಕಚೇರಿ ಎದುರು ಸಮಾವೇಶಗೊಂಡ ಬಿಎಸ್ಪಿ ಕಾರ್ಯಕರ್ತರು ನಗರಸಭೆ ಅಧಿಕಾರಿಗಳ ವಿರುದ್ಧ ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಎಸ್ಪಿ ರಾಜ್ಯ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ನಗರಸಭೆ ಅಧಿಕಾರಿಗಳು ಸಾರ್ವಜನಿಕರಿಗೆ ಸರ್ಕಾರದ ಸೇವೆಗಳನ್ನು ಸಮರ್ಪಕವಾಗಿ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಸಾರ್ವಜನಿಕರು ಆಸ್ತಿಗಳ ಖಾತೆ ಮಾಡಿಸಿಕೊಳ್ಳಲು, ಇ ಸ್ವತ್ತು ಪಡೆದುಕೊಳ್ಳಲು ಹಾಗೂ ವಿವಿಧ ದಾಖಲೆಗಳನ್ನು ಪಡೆಯಲು ಅಲೆದಾಡಬೇಕಾಗಿದೆ. ಸಂಸದರು, ಶಾಸಕರು ಹಾಗೂ ಜಿಲ್ಲಾಡಳಿತ ನಗರಸಭೆಗೆ ಚುರುಕು ಮುಟ್ಟಿಸಿ ಸಾರ್ವಜನಿಕರಿಗೆ ಸರ್ಕಾರದ ಸೇವೆಗಳು ಸಿಗುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಪ್ರತಿಹಂತದಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಮೂಲಕ ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬವಾಗದಂತೆ ನೋಡಿಕೊಳ್ಳಬೇಕು, ದಾಖಲೆಗಳನ್ನು ಪಡೆಯಲು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಬೇಕು’ ಎಂದು ಒತ್ತಾಯಿಸಿದರು.

‘ನಗರಸಭೆಯಲ್ಲಿ ಸಮಸ್ಯೆ ಗಂಭೀರವಾಗಿದ್ದರೂ ಬಗೆಹರಿಸಲು ಕ್ಷೇತ್ರದ ಶಾಸಕರು ಹಾಗೂ ಸಂಸದರು ಸಂಪೂರ್ಣ ವಿಫಲರಾಗಿದ್ದಾರೆ. ಸಂಸದ ಸುನಿಲ್ ಬೋಸ್ ನಗರಸಭೆಯ ಕಡೆಗೆ ಇದುವರೆಗೂ ತಲೆ ಹಾಕಿಲ್ಲ. ಸಾರ್ವಜನಿಕರು ಜನನ, ಮರಣ ಪ್ರಮಾಣ ಪತ್ರ, ಉದ್ದಿಮೆ ಪರವಾನಗಿ ಸಹಿತ ಸಣ್ಣ ಕೆಲಸಗಳಿಗೂ ಅಲೆಯಬೇಕಾಗಿದೆ. ನಗರಸಭೆ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಇದೇ ರೀತಿ ನಿರ್ಲಕ್ಷ್ಯ ಮನೋಭಾವ ಮುಂದುವರಿದರೆ ಪಕ್ಷದಿಂದ ತೀವ್ರ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಬಿಎಸ್ಪಿ ತಾಲ್ಲೂಕು ಅಧ್ಯಕ್ಷ ಶಂಕರ್ ಮಾತನಾಡಿ, ಪಟ್ಟಣದಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಒಳಚರಂಡಿ ವ್ಯವಸ್ಥೆ ಹದಗೆಟ್ಟಿದೆ, ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಸಮಸ್ಯೆ ಹೆಚ್ಚಾಗಿದೆ. ನಗರಸಭೆ ಸಾರ್ವಜನಿಕರ ಕೆಲಸ ಮಾಡುವಲ್ಲಿ ವಿಫಲವಾಗಿದೆ ಎಂದು ದೂರಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ತಹಶೀಲ್ದಾರ್ ಬಸವರಾಜು ಮನವಿ ಸ್ವೀಕರಿಸಿ, ಅಹವಾಲುಗಳನ್ನು ಜಿಲ್ಲಾಧಿಕಾರಿಗೆ ತಿಳಿಸುವ ಮೂಲಕ ಪರಿಹರಿಸಲಾಗುವುದು. ಶೀಘ್ರ ಸಾರ್ವಜನಿಕರ ಸಭೆ ಕರೆಯಲಾಗುವುದು ಎಂದರು.

ಪ್ರತಿಭಟನೆಯಲ್ಲಿ ಬಿಎಸ್ಪಿ ರಾಜ್ಯ ಸಂಚಾಲಕ ಮಣಿ, ನಾಗಯ್ಯ, ಜಿಲ್ಲಾಧ್ಯಕ್ಷ ಬಾಮ ಕೃಷ್ಣಮೂರ್ತಿ, ಜಿಲ್ಲಾ ಉಸ್ತುವಾರಿ ಪುಟ್ಟಸ್ವಾಮಿ, ಬ್ಲಾಕ್ ಅಧ್ಯಕ್ಷ ಶಶಿಧರ್, ತಾಲ್ಲೂಕು ಉಸ್ತುವಾರಿ ರಂಗಸ್ವಾಮಿ (ರವಿ), ಪ್ರಧಾನ ಕಾರ್ಯದರ್ಶಿ ಶಿವು ಉತ್ತಂಬಳ್ಳಿ, ಕವಿತಾ, ಶಿವಮ್ಮ, ನಗರಸಭೆ ಮಾಜಿ ನಾಮನಿರ್ದೇಶಿತ ಸದಸ್ಯ ಮಧುಚಂದ್ರ, ರೈತ ಮುಖಂಡ ದಶರಥ, ರಾಮಕೃಷ್ಣ ಸೇರಿದಂತೆ ಹಲವರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-37-1163466474

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.