ಕೊಳ್ಳೇಗಾಲ: ‘ನಗರಸಭೆಯಲ್ಲಿ ಸಾರ್ವಜನಿಕರಿಗೆ ಇ –ಸ್ವತ್ತು ಸೇರಿದಂತೆ ಸರ್ಕಾರದ ಸೇವೆಗಳು ಸಮರ್ಪಕವಾಗಿ ದೊರೆಯುತ್ತಿಲ್ಲ’ ಎಂದು ಆರೋಪಿಸಿ ಸಾರ್ವಜನಿಕರು ಜಿಲ್ಲಾಧಿಕಾರಿ ಶ್ರೀರೂಪಾ ಅವರ ಬಳಿ ದೂರು ಹೇಳಿಕೊಂಡರು.

ನಗರಸಭೆಗೆ ಬುಧವಾರ ಜಿಲ್ಲಾಧಿಕಾರಿ ಭೇಟಿ ನೀಡಿದ ಸಂದರ್ಭ ಅಹವಾಲುಗಳನ್ನು ಸಲ್ಲಿಸಿ ಸಮಸ್ಯೆ ಹೇಳಿಕೊಂಡ ನಾಗರಿಕರು, ‘ನಗರಸಭೆ ಪೌರಾಯುಕ್ತೆ ರುದ್ರಮ್ಮ ಶರಣಯ್ಯ ಸಾರ್ವಜನಿಕರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ, ಇ– ಸ್ವತ್ತು ಮಾಡಿಕೊಡಲು ವಿಳಂಬ ಮಾಡಲಾಗುತ್ತಿದೆ’ ಎಂದು ದೂರಿದರು.

ಪ್ರಭಾರ ಪೌರಯುಕ್ತರಾಗಿದ್ದ ಎಇಇ ನಟರಾಜು ಅವರ ಅವದಿಯಲ್ಲಿ ಖಾತೆಗಳು ನಡೆಯುತ್ತಿದ್ದು, ಆದರೆ, ಈಗ ವಿಳಂಬವಾಗುತ್ತಿದೆ ಎಂದು ಸಾರ್ವಜನಿಕರು ದೂರಿದರು.

ಅಹವಾಲು ಆಲಿಸಿ ಮಾತನಾಡಿದ ಜಿಲ್ಲಾಧಿಕಾರಿ, ‘ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಿ ಪರಿಶೀಲಿಸಲಾಗುವುದು. ಇ– ಸ್ವತ್ತು ವಿತರಣೆಯಲ್ಲಿ ಆಗುತ್ತಿರುವ ವಿಳಂಬಕ್ಕೆ ಕಾರಣ ತಿಳಿದು ಬಗೆಹರಿಸಲಾಗುವುದು. ನಗರಸಭೆಯಲ್ಲಿ ಸರ್ಕಾರದ ಸೇವೆಗಳು ದೊರೆಯುವಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಮುಖಂಡ ಮಧುಚಂದ್ರ ಮಾತನಾಡಿ, ‘ನಗರಸಭೆ ಪೌರಾಯುಕ್ತರನ್ನು ವರ್ಗಾವಣೆ ಮಾಡಬೇಕು, ಇಲ್ಲವಾದರೆ ಜನಸಾಮಾನ್ಯರು ಸರ್ಕಾರದ ಸೇವೆಗಳನ್ನು ಪಡೆಯಲು ಸಾಧ್ಯವಾಗದೆ ಕಷ್ಟ ಅನುಭವಿಸುತ್ತಾರೆ. ನಗರಸಭೆಯ ವಿಳಂಬಗತಿಯ ಕಾರ್ಯದಿಂದಾಗಿ ಆಸ್ತಿ ಮಾರಾಟ ಮಾಡಲು ಸಾರ್ವಜನಿಕರು ವರ್ಷಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ದೂರಿದರು.

ನಗರಸಭೆಯಲ್ಲಿ ‘ಎ’ ಖಾತೆ ನವೀಕರಿಸಲು ಅರ್ಜಿ ಹಾಕಿದರೆ ‘ಬಿ’ ಖಾತೆ ಮಾಡಿ ಕೊಡಲಾಗುತ್ತಿದೆ. ಇದರಿಂದ ಆಸ್ತಿಯ ಮೇಲೆ ಬ್ಯಾಂಕ್ ಸಾಲ ಪಡೆಯಲಾಗದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ, ಈ ಬಗ್ಗೆ ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳನ್ಗು ಒತ್ತಾಯಿಸಿದರು.

ಇದಕ್ಕೂ ಮುನ್ನ ಪೌರಾಯುಕ್ತರ ಕೊಠಡಿಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ್ದ 22 ಗಣತಿದಾರರು ಹಾಗೂ ಮೇಲ್ವಿಚಾರಕರನ್ನು ಸನ್ಮಾನಿಸಿ ಪ್ರಶಂಸಾ ಪತ್ರ ನೀಡಿ ಜಿಲ್ಲಾಧಿಕಾರಿಗಳು ಅಭಿನಂದಿಸಿದರು.

ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಪೌರಾಯುಕ್ತೆ ರುದ್ರಮ್ಮ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-37-4331783

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.