ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೊಳ್ಳೇಗಾಲ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ’

Published 3 ಆಗಸ್ಟ್ 2023, 13:10 IST
Last Updated 3 ಆಗಸ್ಟ್ 2023, 13:10 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿದ್ದು, ಕಾಂಗ್ರೆಸ್‌ನ ಭದ್ರ ಕೋಟೆ ಎಂದು ಮತ್ತೊಮ್ಮೆ ಸಾಬೀತಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.

ಇಲ್ಲಿನ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಬುಧವಾರ ಅಧ್ಯಕ್ಷೆಯಾಗಿ ಆಯ್ಕೆಯಾದ ರಾಜಮ್ಮ ಅವರನ್ನು ಸನ್ಮಾನಿಸಿ ಮಾತನಾಡಿದರು.

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 31 ಗ್ರಾಮ ಪಂಚಾಯಿತಿಗಳಿದ್ದು, ಬಾಕ್ಲ್ ಅಧ್ಯಕ್ಷರ ಹಾಗೂ ಪಕ್ಷದ ಮುಖಂಡರ ಸಹಕಾರದಿಂದ 26 ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಅಧ್ಯಕ್ಷರಾಗಿ ಅಧಿಕಾರಿ ವಹಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಭದ್ರಕೋಟೆ ಮಾಡಿಕೊಳ್ಳಲಾಗಿದೆ ಎಂದರು.

ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆಗಳು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಮುಂಬರುವ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜಮ್ಮ, ಸದಸ್ಯರಾದ ಎಂ.ಪಿ.ಶಂಕರ್, ಆಶಾ, ಕಾಂಗ್ರೆಸ್ ಮುಖಂಡರಾದ ಎಸ್.ಜಯಣ್ಣ, ಯೋಗೀಶ್, ಯಳಂದೂರು ಬ್ಲಾಕ್ ಅಧ್ಯಕ್ಷ ಎಚ್.ವಿ.ಚಂದ್ರು, ಮುಖಂಡರಾದ ಸಿದ್ದಲಿಂಗಸ್ವಾಮಿ, ಪಶಿ, ಕಮರವಾಡಿ ರೇವಣ್ಣ, ಡಿ.ಪಿ.ರಾಜು, ಕಿಟ್ಟಪ್ಪ, ಗುತ್ತಿಗೆದಾರ ಮಹೇಶ್, ಬಸವಣ್ಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT