ಕೊಳ್ಳೇಗಾಲ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಮಂಗಳವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ನಗರದ ಆರ್.ಎಂ.ಸಿ ತರಕಾರಿ ಮಾರುಕಟ್ಟೆ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಾಂತರ ಠಾಣೆ ಮುಂಭಾಗದ ಮುಖ್ಯ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ನಂತರ ಅಲ್ಲಿಂದ ಹೊರಟ ಪ್ರತಿಭಟನಾಕಾರರು ತಾಲ್ಲೂಕು ಕಚೇರಿಗೆ ಆಗಮಿಸಿ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಅವರಿಗೆ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇ ಗೌಡ ಮಾತನಾಡಿ, ‘ತಾಲ್ಲೂಕಿನಲ್ಲಿ ನೀರಾವರಿ ಜಮೀನುಗಳಿಗಿಂತ ಮಳೆ ಆಶ್ರಿತ ಹಾಗೂ ಅಂತರ್ಜಲ ಜಮೀನುಗಳೇ ಹೆಚ್ಚಾಗಿವೆ, ಹಾಗಾಗಿ ರೈತರ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ತಾಲ್ಲೂಕು ಕಚೇರಿಯಲ್ಲಿ ರೈತರಿಗೆ ಸಾಗುವಳಿ ಚೀಟಿ ನೀಡಿದ್ದಾರೆ. ಆದರೆ ಆರ್ಟಿಸಿ ಹಾಗೂ ದಾಖಲೆಯನ್ನು ಸರಿಯಾದ ಸಮಯಕ್ಕೆ ನೀಡುತ್ತಿಲ್ಲ. ಇದರಿಂದ ರೈತರಿಗೆ ತುಂಬ ತೊಂದರೆಯಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಹಾಗಾಗಿ ಅಧಿಕಾರಿಗಳ ನಡೆಯಿಂದ ಬೇಸತ್ತು ಹೋಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಗ್ರಾಮೀಣ ಭಾಗದ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಇದರಿಂದಾಗಿ ರೈತರ ಬೆಳೆಗಳು ಹಾಳಾಗುತ್ತಿದ್ದು, ವಿದ್ಯುತ್ ಪೂರೈಕೆಯನ್ನು ಬೇಕಾಬಿಟ್ಟಿ ಮಾಡುತ್ತಿದ್ದಾರೆ. ರೈತರ ಜಮೀನುಗಳಿಗೆ ತೆರಳುವ ರಸ್ತೆಗಳನ್ನೂ ಸರಿಪಡಿಸುತ್ತಿಲ್ಲ. ಹೀಗಾಗಿ ರೈತರು ಕಲ್ಲು, ಮುಳ್ಳು ಹಾಗೂ ಹಳ್ಳ–ಕೊಳ್ಳಗಳ ಮೂಲಕವೇ ಜಮೀನುಗಳಿಗೆ ಹೋಗಬೇಕು. ಒಕ್ಕಣೆ ಹಾಗೂ ಇನ್ನಿತರ ಸಂದರ್ಭದಲ್ಲಿ ಲಾರಿ, ಟ್ರಾಕ್ಟರ್ಗಳು ಜಮೀನಿಗೆ ತೆರಳಲು ಸಮಸ್ಯೆಯಾಗಿದೆ. ಹಾಗಾಗಿ ರಸ್ತೆಗಳನ್ನು ಕೂಡಲೇ ಸರಿಪಡಿಸಿಕೊಳ್ಳಬೇಕು’ ಎಂದು ಆಗ್ರಹಿಸಿದರು.

‘30 ವರ್ಷಗಳಿಂದ ಬೆಳೆದ ತೇಗೆದ ಮರಗಳಿಗೆ ಕಟಾವು ಮಾಡಲು ಅರಣ್ಯ ಇಲಾಖೆಯವರು ಪರವಾಗಿ ನೀಡುತ್ತಿಲ್ಲ. ಹೀಗೆ ಅನೇಕ ಸಮಸ್ಯೆಗಳು ಇದ್ದರೂ ಅದನ್ನು ಬಗೆಹರಿಸದೆ ಅಧಿಕಾರಿಗಳು ಸುಮ್ಮನೆ ಕಾಲ ಹರಣ ಮಾಡುತ್ತಿದ್ದಾರೆ. ಹಾಗಾಗಿ ನಮ್ಮ ಸಮಸ್ಯೆಗಳು ಈಡೇರುವವರೆಗೂ ನಾವು ಪ್ರತಿಭಟನೆಯನ್ನು ಕೈಬಿಡುವುದಿಲ್ಲ’ ಎಂದು ತಿಳಿಸಿದರು.

ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಮಾತನಾಡಿ, ‘ಮೇ 21ರ ನಂತರ ರೈತರ ಸಭೆ ಕರೆದು ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುತ್ತೇವೆ’ ಎಂದು ಹೇಳಿದ ಬಳಿಕ ಪ್ರತಿಭಟನೆಯನ್ನು ಕೈಬಿಟ್ಟರು.

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಶಿವಮಲ್ಲು, ಜಿಲ್ಲಾ ಕಾಯಂ ಸದಸ್ಯ ರವಿನಾಯ್ಡು, ನಾಗರಾಜು ಅರೇಪಾಳ್ಯ, ಅಶೋಕ, ಶಿವರಾಮ್, ಮಧುವನ ಅರಸ್, ಪರಮೇಶ್, ಮುತ್ತುರಾಜ್, ಗೋವಿಂದ, ಲಿಂಗರಾಜು, ಸಿದ್ದರಾಜು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-37-1442826204

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.