ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ: ಮೀನುಗಾರರ ಬಂಧನ

Published 8 ಜುಲೈ 2023, 15:41 IST
Last Updated 8 ಜುಲೈ 2023, 15:41 IST
ಅಕ್ಷರ ಗಾತ್ರ

ಕೊಳ್ಳೇಗಾಲ: ತಾಲ್ಲೂಕಿನ ಜಾಗೇರಿ ಗ್ರಾಮ ವ್ಯಾಪ್ತಿಯ ಚಿಕ್ಕಮಾಕಳಿ ಅರಣ್ಯ ಪ್ರದೇಶದ ಕಾವೇರಿ ನದಿಯಲ್ಲಿ ಸ್ಫೋಟಕ ಸಾಮಗ್ರಿ ಬಳಸಿ ಜಲಚರ ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ನಾಲ್ವರ ಪೈಕಿ ಒಬ್ಬ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.


ಜಾಗೇರಿಯ ಶಾಂತಿನಗರ ನಿವಾಸಿ ಜಕಾರಿಯಸ್ (26) ಬಂಧಿತ ಆರೋಪಿ. ಸಿ.ಆರ್.ನಗರದ ದೊರೈ(40), ವೆಳಿಯ(45) ಹಾಗೂ ಪೌಲ್(30) ತಲೆಮರೆಸಿಕೊಂಡಿದ್ದಾರೆ.

ಚಿಕ್ಕಮಾಕಳಿ ಅರಣ್ಯ ಪ್ರದೇಶದ ಕಾವೇರಿ ನದಿಯಲ್ಲಿ ಮೀನು ಮತ್ತು ಇತರೆ ಜಲಚರಗಳನ್ನು ಸ್ಫೋಟಕಗಳನ್ನು ಬಳಸಿ ಬೇಟೆಯಾಡುತ್ತಿದ್ದಾಗ ಶಬ್ದವನ್ನು ಆಲಿಸಿ ಇಲ್ಲಿನ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದರು. ಆರೋಪಿಗಳಿಂದ 10 ಕೆ.ಜಿ. ಮೀನು  ವಶಪಡಿಸಿಕೊಂಡಿದ್ದಾರೆ.

ಅರಣ್ಯ ಇಲಾಖೆ ಕಚೇರಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT