ಕೊಳ್ಳೇಗಾಲ: ತಾಲ್ಲೂಕಿನ ಮಧ್ಯರಂಗನಾಥ ಸ್ವಾಮಿ ದೇವಸ್ಥಾನವನ್ನು ಮೇ 21 ರಂದು ಉದ್ಘಾಟಿಸಿ ಭಕ್ತರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಹನೂರು ಶಾಸಕ ಎಂ.ಆರ್ ಮಂಜುನಾಥ್ ಹೇಳಿದರು.

ಮಧ್ಯರಂಗನಾಥ ಸ್ವಾಮಿ ದೇವಸ್ಥಾನದ ಜೀಣೋದ್ಧಾರ ಕಾರ್ಯವನ್ನು ವೀಕ್ಷಿಸಿ ಮಾತನಾಡಿದ ಅವರು, ಶಿವನಸಮುದ್ರ ಪವಿತ್ರ ಸ್ಥಳದಲ್ಲಿ ಮಧ್ಯರಂಗನಾಥ ದೇವಸ್ಥಾನವಿರುವುದು ನಮ್ಮೆಲ್ಲರ ಪುಣ್ಯ. ಈ ದೇವಸ್ಥಾನವು ಶಿಥಿಲಗೊಂಡಿದ್ದರಿಂದ ಜೀಣೋದ್ಧಾರ ಆರಂಭಿಸಲಾಗಿತ್ತು. ದಾನಿಗಳು, ಳಿಂದ ಮತ್ತು ವಿವಿಧ ಇಲಾಖೆಗಳಿಂದ ದುರಸ್ತಿ ಕಾರ್ಯ ಭರದಿಂದ ಸಾಗಿ ಮುಕ್ತಾಯದ ಹಂತಕ್ಕೆ ತಲುಪಿದೆ. ಸುಂದರವಾಗಿ ದೇವಸ್ಥಾನವನ್ನು ನಿರ್ಮಾಣ ಮಾಡಲಾಗಿದ್ದು ಮೇ 17 ರಿಂದ 21 ರವರೆಗೂ ಹೋಮಹವನ, ಪೂಜಾ ಕೈಂಕರ್ಯಗಳನ್ನು ನಡೆಸಿ ಮೇ 21 ರಂದು ದೇವಸ್ಥಾನವನ್ನು ಉದ್ಘಾಟಿಸಿ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದರು.

21ರಂದು ದೇವಸ್ಥಾನದ ಲೋಕಾರ್ಪಣೆಯ ದಿನ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ಜಿಲ್ಲೆಯ ಮತ್ತು ಹೊರಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿ ಸೇರಿದಂತೆ ಹಲವಾರು ಜನಪ್ರತಿನಿಧಿಗಳು ಅಧಿಕಾರಿಗಳು, ಸಾರ್ವಜನಿಕರು ಮುಖಂಡರುಗಳು ಆಗಮಿಸುತ್ತಾರೆ ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಬಸವರಾಜು, ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್, ನಿರ್ಮಿತಿ ಕೇಂದ್ರ ಎಂಜಿನಿಯರ್ ರವಿಕುಮಾರ್, ಸತ್ತೇಗಾಲ ಗ್ರಾ.ಪಂ ಮಾಜಿ ಅಧ್ಯಕ್ಷ ಮಲ್ಲೇಶ್, ಪಿಎಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ, ಡಿ ಕೆ ರಾಜು, ವಿಜಯಕುಮಾರ್, ಅರ್ಚಕರು ಮಧುಸೂದನ್, ಶ್ರೀನಿವಾಸ್ ಶಾಸ್ತ್ರೀ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-37-1735920805

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.