ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಏ.26 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ನಿವೃತ್ತ ಡಿವೈಎಸ್ಪಿ ಪಿ.ಎಂ.ಸಿದ್ದರಾಜು ಹೇಳಿದರು.

ಮುಳ್ಳೂರು ಗ್ರಾಮದ ಬಲಗೈ ಜನಾಂಗದ ಎಲ್ಲಾ ಯಜಮಾನರು, ಊರಿನ ನಿವೃತ್ತ ಹಾಗೂ ಹಾಲಿ ಸರ್ಕಾರಿ ನೌಕರರು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಸಹಯೋಗದೊಂದಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಗ್ರಾಮದ ಎಲ್ಲ ಕೋಮಿನ ಜನರನ್ನು ಒಗ್ಗೂಡಿಸಿಕೊಂಡು ಅಂಬೇಡ್ಕರ್ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಅಂಬೇಡ್ಕರ್ ಜಯಂತಿ ಅಂಗವಾಗಿ ಭಾನುವಾರ ಮಧ್ಯಾಹ್ನ 2 ಗಂಟೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಬೃಹತ್ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ನಂತರ ಸಂಜೆ ಗ್ರಾಮದಲ್ಲಿ ವೇದಿಕೆ ಕಾರ್ಯಕ್ರಮ ತಿ.ನರಸೀಪುರ ತಾಲ್ಲೂಕಿನ ನಳಂದ ಬುದ್ಧ ವಿಹಾರದ ಬಂತೆ ಬೋಧಿರತ್ನ ಹಾಗೂ ಉರಿಲಿಂಗಿಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶಸ್ವಾಮೀಜಿ ಅವರ ದಿವ್ಯ ಸಾನಿಧ್ಯವಹಿಸಲಿದ್ದಾರೆ.

ವೇದಿಕೆ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಉದ್ಘಾಟಿಸಲಿದ್ದು, ಸಂಸದ ಸುನಿಲ್ ಬೋಸ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಮೈಸೂರು ಮಹಾರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಬಿಪಿನ್ ನಾಗರಾಜು ಆಗಮಿಸಲಿದ್ದು, ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಎರಡನೇ ಬಾರಿಗೆ ಮುಖ್ಯಮಂತ್ರಿ ಪದಕ ಪಡೆದಿರುವ ಬೆಂಗಳೂರಿನ ಸಿಸಿಬಿಯ ಎಸಿಪಿ ಎಚ್.ಕೆ.ಮಹಾನಂದ ಅವರ ಸೇರಿದಂತೆ ಪಿಡಿಒ ಸವಿತಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಗ್ರಾಮದಲ್ಲಿರುವ ಸೋದರ ಸಮಾಜದ ಎಲ್ಲಾ ಯಜಮಾನರು ಮತ್ತು ನಮ್ಮೂರಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಪ್ರೇಕ್ಷಾ.ಎಸ್, ಧನ್ಯಾ.ಎಲ್, ಶ್ರೇಯಸ್.ಎಸ್, ಸ್ನೇಹ.ಎಸ್ ಹಾಗೂ ಇತರರಿಗೆ ಗೌರವ ಸನ್ಮಾನ ನೆರವೇರಿಸಲಿದ್ದು, ಈ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಗ್ರಾಮದ ನಿವೃತ್ತ ಅಧಿಕಾರಿ ಎಸ್.ಸಿದ್ದರಾಜು, ಮುಖಂಡ ದೊರೆರಾಜ್, ಬಸವಣ್ಣ, ಸಂಪತ್ ಕುಮಾರ್, ಚಂದ್ರಬಾಬು, ಜಿ.ಪಂ.ಮಾಜಿ ಸದಸ್ಯ ಎಲ್.ನಾಗರಾಜ್ ಕಮಲ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-37-1087502736

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.