ಕೊಳ್ಳೇಗಾಲ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪಂಚಾಯತ್ ಮಟ್ಟದ ಅಧಿಕಾರಿಗಳು ಹಾಗೂ ಸ್ಥಳೀಯ ನೌಕರರು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸಹಯೋಗದೊಂದಿಗೆ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಪಿಡಿಒಗಳು ತಮ್ಮ ಕರ್ತವ್ಯದಲ್ಲಿ ಪಾರದರ್ಶಕತೆ ಕಾಪಾಡಿಕೊಂಡು, ಹಣದ ದುರುಪಯೋಗ ತಡೆಯಲು ಜಾಗೃತರಾಗಿರಬೇಕು. ಜೊತೆಗೆ ತಾಲ್ಲೂಕಿನ ಅಭಿವೃದ್ಧಿಗೆ ಎಲ್ಲರೂ ಸಮರ್ಪಿತವಾಗಿ ಶ್ರಮಿಸಬೇಕು. ಜನಸೇವೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೊಳ್ಳೇಗಾಲದಲ್ಲಿ ₹15 ಲಕ್ಷ ವೆಚ್ಚದಲ್ಲಿ ‘ಅಕ್ಕ ಕೆಫೆ’ ಸ್ಥಾಪನೆಗೆ ಅನುಮೋದನೆ ದೊರೆತಿದ್ದು, ಇದು ಸ್ಥಳೀಯ ಜನರಿಗೆ ಉಪಯುಕ್ತ ಹಾಗೂ ಅನುಕೂಲಕರ ಸೇವಾ ಕೇಂದ್ರವಾಗಲಿದೆ’ ಎಂದು ನಿರೀಕ್ಷಿಸಲಾಗಿದೆ.

‘ಇ-ಸ್ವತ್ತು ಸೇರಿದಂತೆ ವಿವಿಧ ಸಾರ್ವಜನಿಕ ಸೇವೆಗಳಲ್ಲಿ ಜನರನ್ನು ಅನಗತ್ಯವಾಗಿ ಅಲೆದಾಡಿಸದೆ, ಸಮಯೋಚಿತವಾಗಿ ಕಾರ್ಯನಿರ್ವಹಿಸಬೇಕು. ಕೊಳ್ಳೇಗಾಲವನ್ನು ರಾಜ್ಯಮಟ್ಟದಲ್ಲಿ ಮಾದರಿ ತಾಲ್ಲೂಕಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಎಲ್ಲರೂ ಸೇರಿ ಸಾಧಿಸಬೇಕು’ ಎಂದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಗೋಪಾಲಕೃಷ್ಣ, ಸಹಾಯಕ ಲೆಕ್ಕಾಧಿಕಾರಿ ರಾಜಣ್ಣ, ಸಹಾಯಕ ಯೋಜನಾಧಿಕಾರಿ ಸಂದೇಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-37-1679020082

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.