ಕೊಳ್ಳೇಗಾಲ: ಪ್ಲಾಸ್ಟಿಕ್ ಪರಿಸರಕ್ಕೆ ಮಾರಕವಾಗಿದ್ದು, ಅದರ ಬಳಕೆಯಿಂದ ಅತಿಯಾದ ಪರಿಸರ ಮಾಲಿನ್ಯವಾಗುತ್ತಿದೆ ಎಂದು ನಿಸರ್ಗ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಪ್ರಾಂಶುಪಾಲ ಜಗದೀಶ್ ಹೇಳಿದರು.

ತಾಲ್ಲೂಕಿನ, ಸಿದ್ದೇಶ್ವರ ಬೆಟ್ಟದಲ್ಲಿ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ, ಚಾಮರಾಜನಗರ, ಕೊಳ್ಳೇಗಾಲ ವನ್ಯಜೀವಿ ವಲಯ, ಮಾನಸ ಶಿಕ್ಷಣ ಸಂಸ್ಥೆ, ನಿಸರ್ಗ ಇನ್ಸ್ಟಿಟ್ಯೂಟ್ ಆಫ್ ಎಜುಕೇಷನ್ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜನ ಜಾಗೃತಿ ಹಾಗೂ ಪ್ಲಾಸ್ಟಿಕ್ ಸ್ವಚ್ಛತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡದೇ ಎಲ್ಲೆಂದರಲ್ಲಿ ಬಿಸಾಕುತ್ತಿದ್ದಾರೆ, ಅದು ನೆಲ, ಜಲ,ಮತ್ತು ವಾಯುವಿನಲ್ಲಿ ವಿಲೀನಗೊಂಡು ವಿಷಕಾರಿ ಅಂಶವಾಗಿ ಪರಿವರ್ತನೆಯಾಗುತ್ತಿದೆ. ಹಾಗಾಗಿ ಏಕಮುಖ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಿ, ಪರಿಸರ ಪೂರಕವಾದ ನಿಯಮಗಳನ್ನು ಪಾಲಿಸಬೇಕು. ಆಹಾರ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ನಲ್ಲಿ ಸಂಸ್ಕರಿಸದೆ, ಸ್ಟೀಲ್ ಬಾಕ್ಸ್ನಲ್ಲಿ ಹಾಕಿ ಉಪಯೋಗಿಸಬೇಕು, ಪ್ಲಾಸ್ಟಿಕ್ ಬಳಕೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚಿದೆ ಎಂದರು.

ಸಿದ್ದೇಶ್ವರ ಬೆಟ್ಟದಲ್ಲಿ ಒಟ್ಟು 40 ಚೀಲಗಳ ಪ್ಲಾಸ್ಟಿಕ್ ಅನ್ನು ಸಂಗ್ರಹಿಸಲಾಯಿತು. ಕಾರ್ಯಕ್ರಮದಲ್ಲಿ ವಲಯ ಅರಣ್ಯ ಅಧಿಕಾರಿ ವಾಸು, ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶಿವಮ್ಮ ಎಸ್. ಸತೀಶ್, ಕೃಷ್ಣಮೂರ್ತಿ, ಅಮಿತ್ ಕುಮಾರ, ಕುಮಾರಿ ಭೂಮಿಕಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-37-34259136

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.