ಶುಕ್ರವಾರ, ಜನವರಿ 22, 2021
23 °C

ಬಾಲಕಿ ಅತ್ಯಾಚಾರಕ್ಕೆ ಯತ್ನ; ಆರೋಪಿ ಪರಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಳ್ಳೇಗಾಲ: ಹದಿಮೂರು ವರ್ಷದ ಬಾಲಕಿ ಮೇಲೆ ಅತ್ಯಾಚ್ಯಾರಕ್ಕೆ ಯತ್ನಿಸಿರುವ ವ್ಯಕ್ತಿಯೊಬ್ಬರು ಆಕೆಯ ಕುಟುಂಬಸ್ಥರ ಮೇಲೆ ಕೊಲೆ ಬೆದರಿಕೆ ಹಾಕಿ ಪರಾರಿಯಾಗಿರುವ ಪ್ರಕರಣ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಪೊಲೀಸರು ಆರೋಪಿ ವಿರುದ್ಧ ಪೊಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ‌‌ನಗರದವರೇ ಆದ ಶಿವಕುಮಾರ್‌ ಆರೋಪಿ. 

ಬಾಲಕಿಯು ಶುಕ್ರವಾರ ರಾತ್ರಿ ಬಹಿರ್ದೆಸೆಗಾಗಿ ಮನೆಯ ಹಿಂಬದಿಗೆ ಬಂದಿದ್ದಾಗ, ಆ ಸ್ಥಳದಲ್ಲಿದ್ದ ಆರೋಪಿ ಆಕೆಯ ಕೈಯನ್ನು ಹಿಡಿದು ಎಳೆದಾಡಿದ್ದಾರೆ. ಬಾಲಕಿ ಕೂಗಿಕೊಂಡಾಗ ಕುಟಂಬದವರು ಹೊರಗಡೆ ಬಂದಿದ್ದಾರೆ. ಬಾಲಕಿ ನಡೆದ ಘಟನೆಗಳನ್ನು ವಿವರಿಸಿದ್ದಾಳೆ.

ನಡೆದ ಘಟನೆಯನ್ನು ತಿಳಿಸಿದರೆ ಕೊಲೆ ಮಾಡುವುದಾಗಿ ಶಿವಕುಮಾರ್‌ ಬೆದರಿಕೆ ಒಡ್ಡಿದ್ದಾರೆ ಎಂದು ಬಾಲಕಿ ಪೋಷಕರು ನಗರ ಠಾಣೆಗೆ ದೂರು ನೀಡಿದ್ದಾರೆ.

ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು